ಪುಣೆಯ ನವಲೆ ಬ್ರಿಡ್ಜ್ ಬಳಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆನ್‌ಲೈನ್ ಡೆಲಿವರಿ ಬಾಯ್ ಒಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮುಂಬೈ-ಬೆಂಗಳೂರು ಹೆದ್ದಾರಿಯ ನವಲೆ ಬ್ರಿಡ್ಜ್ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಟ್ರಕ್ ಹಲವು ವಾಹನಗಳಿಗೆ ಸರಣಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸಿಮೆಂಟ್ ತುಂಬಿದ ಲಾರಿಯೊಂದು ನವಲೆ ಸೇತುವೆಯ ಕಡಿದಾದ ಇಳಿಜಾರಿನಲ್ಲಿ ವೇಗವಾಗಿ ಬರುತ್ತಿದ್ದಾಗ ದಿಢೀರನೆ ಬ್ರೇಕ್ ವೈಫಲ್ಯಗೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಭಾರಿ ಗಾತ್ರದ ಟ್ರಕ್, ರಸ್ತೆಯಲ್ಲಿ ಮುಂದೆ ಚಲಿಸುತ್ತಿದ್ದ ಹಲವು ವಾಹನಗಳಿಗೆ ಸರಣಿಯಾಗಿ ಡಿಕ್ಕಿ ಹೊಡೆದು ಅಟ್ಟಹಾಸ ಮೆರೆದಿದೆ.
ದುರದೃಷ್ಟವಶಾತ್, ತನ್ನ ದ್ವಿಚಕ್ರ ವಾಹನದಲ್ಲಿ ಆರ್ಡರ್ ತಲುಪಿಸಲು ಹೋಗುತ್ತಿದ್ದ ಆನ್‌ಲೈನ್ ಡೆಲಿವರಿ ಬಾಯ್ ಮೇಲೂ ನಿಯಂತ್ರಣ ತಪ್ಪಿದ ಈ ಟ್ರಕ್ ಹರಿದಿದೆ. ಡಿಕ್ಕಿಯ ಭೀಕರ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಯುವಕ, ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಈ ಇಡೀ ಅಪಘಾತದ ಭೀಕರ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಅಪಘಾತದ ತೀವ್ರತೆಗೆ ಹಲವು ವಾಹನಗಳು ಜಖಂಗೊಂಡಿದ್ದು, ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
PublicNext
11/06/2026 03:18 pm
LOADING...