ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ ಪೊಲೀಸ್ ಇಲಾಖೆಗೆ ಆಘಾತ : ಚಿಕಿತ್ಸೆ ಫಲಿಸದೇ ಕಾನ್‌ಸ್ಟೇಬಲ್‌ ನಿಧನ

ಬಾಗಲಕೋಟೆ: ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾನ್ಸ್‌ಟೇಬಲ್ ಗೌರಿಶಂಕರ್ ಬಿರಾದಾರ (40) ಅವರು ಚಿಕಿತ್ಸೆ ಫಲಿಸದೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆ ಹಾಗೂ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.

ಕಳೆದ ಕೆಲವು ದಿನಗಳಿಂದ ಹೃದಯಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಗೌರಿಶಂಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಗೌರಿಶಂಕರ್ ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಮೃತ ಗೌರಿಶಂಕರ್ ಅವರು ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಗೋಠೆ ಗ್ರಾಮದ ನಿವಾಸಿಯಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ತರಲಾಗುತ್ತಿದ್ದು, ಇಂದು ಸಂಜೆ ಗೋಠೆ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಾನ್ಸ್‌ಟೇಬಲ್ ಗೌರಿಶಂಕರ್ ನಿಧನಕ್ಕೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

11/06/2026 04:06 pm

Cinque Terre

4.78 K

Cinque Terre

0

ಸಂಬಂಧಿತ ಸುದ್ದಿ