ಮಧ್ಯಪ್ರದೇಶ : ಸಾಗರ್ ಜಿಲ್ಲೆಯಲ್ಲಿ ವಿದ್ಯುತ್ ಇಲಾಖೆಯ ಕಿರಿಯ ಇಂಜಿನಿಯರ್ (ಜೆಇ) ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಕಚೇರಿಗೆ ಅಕ್ರಮವಾಗಿ ನುಗ್ಗಿದ ಆರೋಪಿಗಳು ಜೆಇಗೆ ಅಶ್ಲೀಲ ಪದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ವರದಿಗಳ ಪ್ರಕಾರ, ಜೆಇ ತಮ್ಮ ಕಚೇರಿಯಲ್ಲಿ ಕುಳಿತಿದ್ದಾಗ, ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಕಚೇರಿಗೆ ಪ್ರವೇಶಿಸಿದ್ದಾರೆ. ಯಾವುದೇ ಪೂರ್ವಾನುಮತಿ ಇಲ್ಲದೆ ನುಗ್ಗಿದ ದುಷ್ಕರ್ಮಿಗಳು, ಜೆಇ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ.
ಘಟನೆ ನಡೆದ ನಂತರ, ಹಲ್ಲೆಗೊಳಗಾದ ಜೆಇ ಅವರು ನಾಲ್ವರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಅನ್ವಯ, ಕಚೇರಿಗೆ ಅಕ್ರಮ ಪ್ರವೇಶ, ಹಲ್ಲೆ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುವುದು, ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಹಾಕಿದ ಆರೋಪಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
PublicNext
11/06/2026 04:26 pm
LOADING...