ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಮಖಂಡಿ : ಸಾವಳಗಿ ಗ್ರಾಮದಲ್ಲಿ ಕಳ್ಳತನ ಪ್ರಕರಣಗಳ ಹೆಚ್ಚಳ - ಪೊಲೀಸ್ ಗಸ್ತು ಹೆಚ್ಚಿಸಲು ಆಗ್ರಹ!

ಜಮಖಂಡಿ : ತಾಲೂಕಿನ ಸಾವಳಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಳ್ಳಂ ಬೆಳಗ್ಗೆ ನಡೆದ ಮತ್ತೊಂದು ಕಳ್ಳತನದ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ.

ಗ್ರಾಮದ ಎರಡು ಮನೆಗಳ ಬೀಗ ಮುರಿದು ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ, ಅಮೂಲ್ಯ ವಸ್ತುಗಳು ಮತ್ತು ನಗದು ದೋಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ . ಕಳೆದ ಕೆಲವು ತಿಂಗಳುಗಳಿಂದ ಅನೇಕ ಕಳ್ಳತನ ಪ್ರಕರಣಗಳು ದಾಖಲಾಗಿದ್ದರೂ, ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಈ ಕುರಿತು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, “ಪ್ರತಿದಿನ ಹೊಸ ಕಳ್ಳತನ ಪ್ರಕರಣಗಳು ನಡೆಯುತ್ತಿವೆ. ಆದರೆ ಇದುವರೆಗೆ ಒಂದು ಪ್ರಕರಣವನ್ನೂ ಪೊಲೀಸರು ಸಂಪೂರ್ಣವಾಗಿ ಪತ್ತೆ ಹಚ್ಚಿಲ್ಲ. ಇದರಿಂದ ಕಳ್ಳರಿಗೆ ಇನ್ನಷ್ಟು ಧೈರ್ಯ ಬರುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾತ್ರಿಯ ವೇಳೆ ಪೊಲೀಸ್ ಗಸ್ತು ಹೆಚ್ಚಿಸುವುದು, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ವಹಿಸುವುದು ಹಾಗೂ ಕಳ್ಳತನ ಪ್ರಕರಣಗಳ ತನಿಖೆಯನ್ನು ತ್ವರಿತಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Edited By :
PublicNext

PublicNext

11/06/2026 04:43 pm

Cinque Terre

9.66 K

Cinque Terre

0

ಸಂಬಂಧಿತ ಸುದ್ದಿ