ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ತಂಗಿದ್ದ ದಿಲ್ಲಿಯ ಕೌಟಿಲ್ಯ ಮಾರ್ಗದಲ್ಲಿರುವ 'ತಮಿಳುನಾಡು ಭವನ'ದಲ್ಲಿ ಸಣ್ಣ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದೆ. ಮುಖ್ಯಮಂತ್ರಿ ವಿಜಯ್ ನೀತಿ ಆಯೋಗದ ಸಭೆಗೆ ತೆರಳಲು ಅತಿಥಿಗೃಹದಿಂದ ನಿರ್ಗಮಿಸಿದ ಕೆಲವೇ ಕ್ಷಣಗಳಲ್ಲಿ ಈ ಘಟನೆ ಸಂಭವಿಸಿದ್ದು, ಚಾಣಕ್ಯಪುರಿ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ತಮಿಳುನಾಡು ಭವನದಿಂದ ಮುಖ್ಯಮಂತ್ರಿ ವಿಜಯ್ ನಿರ್ಗಮಿಸುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಅನಿಲ ಸೋರಿಕೆಯಿಂದ ಈ ಬೆಂಕಿ ಅವಘಡ ಸಂಭವಿಸಿರುವ ಸಾಧ್ಯತೆ ಇದ್ದು, ತಕ್ಷಣವೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಮೂಲಗಳು ತಿಳಿಸಿವೆ.
PublicNext
11/06/2026 04:48 pm
LOADING...