ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕ ಸಂಘಟನೆ ಪ್ರತಿಭಟನೆ

ಧಾರವಾಡ: ಜಿಲ್ಲೆಯ ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸೇವೆ ಖಾಯಂಗೊಳಿಸಬೇಕು ಹಾಗೂ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕ ಸಂಘಟನೆಯ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ, ಜಿಲ್ಲಾ ಉಪಾಧ್ಯಕ್ಷೆ ಭುವನಾ ಬಳ್ಳಾರಿ, ಶೈನಾಜ್ ಹುಡದಮನಿ, ಗಂಗಮ್ಮ ನಾಗನಾಯಕ, ಕುಸುಮ ವೀರಕರ್, ರತ್ನಾ ಧಾರವಾಡ, ನಿರ್ಮಲಾ ಚಲವಾದಿ,ಸುಧಾ ಸಿಂದಗಿ, ಲಕ್ಷ್ಮಿ ಮೇದಾರ್ ಭಾಗವಹಿಸಿದ್ದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

11/06/2026 05:40 pm

Cinque Terre

156.4 K

Cinque Terre

1

ಸಂಬಂಧಿತ ಸುದ್ದಿ