ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಥಗಿತಗೊಂಡ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಪುನರಾರಂಭಿಸಿ : ಕೇಂದ್ರಕ್ಕೆ ಸಚಿವ ಎಂ.ಬಿ ಪಾಟೀಲ ಪತ್ರ

ಬೆಂಗಳೂರು : ಬೆಂಗಳೂರು–ಶಿವಮೊಗ್ಗ ವಿಮಾನ ಸೇವೆಯನ್ನು ಉಡಾನ್ ಯೋಜನೆಯ ಮುಂದಿನ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಿ ಪುನರಾರಂಭಗೊಳಿಸುವಂತೆ ಕೋರಿ ಕೇಂದ್ರ ವಿಮಾನಯಾನ ಸಚಿವ ಶ್ರೀ ಕಿಂಜರಾಪು ರಾಮಮೋಹನ್ ನಾಯ್ಡು ಅವರಿಗೆ ಸಚಿವ ಎಂಬಿ ಪಾಟೀಲ ಪತ್ರ ಬರೆದಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು ಬೆಂಗಳೂರು-ಶಿವಮೊಗ್ಗ ವಿಮಾನ ಮಾರ್ಗವನ್ನು ಉಡಾನ್ ಯೋಜನೆಯಡಿ ಸೇರಿಸಿ, ಸ್ಥಗಿತಗೊಂಡಿರುವ ವಿಮಾನ ಸೇವೆಯನ್ನು ಶೀಘ್ರವೇ ಪುನರಾರಂಭಿಸುವಂತೆ ಕೇಂದ್ರಕ್ಕೆ ಅಧಿಕೃತವಾಗಿ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣವು 2023ರಲ್ಲಿ ಕಾರ್ಯಾರಂಭ ಮಾಡಿತ್ತು. ಆರಂಭದಲ್ಲಿ, ಇಂಡಿಗೋ ವಿಮಾನಯಾನ ಸಂಸ್ಥೆಯು ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಕಳೆದ ಕೆಲವು ತಿಂಗಳಿಂದ ಈ ಸೇವೆ ಸ್ಥಗಿತಗೊಂಡಿದ್ದು, ಈ ಮಾರ್ಗದಲ್ಲಿ ಪ್ರಯಾಣಿಸುವವರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ.

ಹಾಗಾಗಿ ಈ ವಿಮಾನ ಸೇವೆಯ ಪುನರಾರಂಭವು ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ ಹಾಗೂ ಹಾವೇರಿ ಜಿಲ್ಲೆಗಳ ಆರ್ಥಿಕ, ಕೃಷಿ, ಪ್ರವಾಸೋದ್ಯಮ ಮತ್ತು ಕೈಗಾರಿಕಾ ಬೆಳವಣಿಗೆಗೆ ಅತ್ಯಂತ ನಿರ್ಣಾಯಕವಾಗಿದೆ. ಈ ಜಿಲ್ಲೆಗಳ ಸಮಗ್ರ ಪ್ರಗತಿಗೆ ಉತ್ತಮ ವಾಯು ಸಂಪರ್ಕ ಅತಿ ಅಗತ್ಯ ಎಂದು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಈಗಾಗಲೇ ಅಭಿವೃದ್ಧಿಯಾಗುತ್ತಿವೆ. ಈ ಸಕಾರಾತ್ಮಕ ಬೆಳವಣಿಗೆಯ ಹಿನ್ನೆಲೆಯಲ್ಲಿ, ಉಡಾನ್ ಯೋಜನೆಯಡಿ ಈ ಮಾರ್ಗವನ್ನು ಸೇರ್ಪಡೆಗೊಳಿಸಿ ಆದಷ್ಟು ಬೇಗ ವಿಮಾನ ಸೇವೆ ಪುನರಾರಂಭಕ್ಕೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Edited By : Nirmala Aralikatti
PublicNext

PublicNext

11/06/2026 05:41 pm

Cinque Terre

7.32 K

Cinque Terre

0

ಸಂಬಂಧಿತ ಸುದ್ದಿ