ನವದೆಹಲಿ : ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಡಿ.ಕೆ. ಶಿವಕುಮಾರ್ ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಮೊದಲ ಬಾರಿಗೆ ಭೇಟಿ ಮಾಡಿದರು.
ಈ ಭೇಟಿಯ ಸಂದರ್ಭದಲ್ಲಿ, ಕರ್ನಾಟಕದ ಅಭಿವೃದ್ಧಿ ಆದ್ಯತೆಗಳ ಕುರಿತು ರಚನಾತ್ಮಕ ಚರ್ಚೆ ನಡೆಸಲಾಯಿತು. ಮೂಲಸೌಕರ್ಯ, ಹೂಡಿಕೆ, ನಗರ ಸಾರಿಗೆ, ನೀರಾವರಿ, ನಾವೀನ್ಯತೆ ಮತ್ತು ಜನರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಕಲ್ಯಾಣ ಯೋಜನೆಗಳು ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಯಿತು.
ಕರ್ನಾಟಕವು ಸದಾ ಭಾರತದ ಬೆಳವಣಿಗೆಯ ಕಥೆಗೆ ಪ್ರಮುಖ ಕೊಡುಗೆ ನೀಡಿದೆ. ಈ ಪಾತ್ರವನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.
"ಅಭಿವೃದ್ಧಿಯನ್ನು ವೇಗಗೊಳಿಸಲು, ಹೆಚ್ಚಿನ ಅವಕಾಶಗಳನ್ನು ಆಕರ್ಷಿಸಲು ಮತ್ತು ಕರ್ನಾಟಕದ ಜನರ ಆಕಾಂಕ್ಷೆಗಳನ್ನು ಈಡೇರಿಸಲು ಸಹಕಾರ ಒಕ್ಕೂಟ ವ್ಯವಸ್ಥೆಯ ಸ್ಫೂರ್ತಿಯೊಂದಿಗೆ ಕೇಂದ್ರ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ, ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಒಟ್ಟಾಗಿ, ಬಲಿಷ್ಠ ಕರ್ನಾಟಕವನ್ನು ನಿರ್ಮಿಸಲು ಮತ್ತು ಬಲಿಷ್ಠ ಭಾರತಕ್ಕೆ ಅರ್ಥಪೂರ್ಣವಾಗಿ ಕೊಡುಗೆ ನೀಡಲು ಸಾಧ್ಯವಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
PublicNext
11/06/2026 07:02 pm
LOADING...