ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿಯಲ್ಲಿ ಮಹಿಳೆಯರ ಉಜ್ವಲ ಭವಿಷ್ಯಕ್ಕೆ ನೂತನ ಕ್ರಿಯಾ ಯೋಜನೆ !

ಶಿರಸಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸದ 2026-27ನೇ ಸಾಲಿನ ಕ್ರಿಯಾ ಯೋಜನೆಯ ಸಭೆಯು ತಾಲ್ಲೂಕಿನ ಯೋಜನಾ ಕಚೇರಿಯಲ್ಲಿ ಜರಗಿತು.

ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಎಂ. ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಮಾತೃಶ್ರೀ ಹೇಮಾವತಿ ಅಮ್ಮನವರ ಸಲಹೆಯಂತೆ ಪ್ರಸ್ತುತ ವರ್ಷದಲ್ಲಿ ಮಹಿಳೆಯರಿಗೆ ಉಪಯುಕ್ತವಾಗುವಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಆರೋಗ್ಯ, ಶಿಕ್ಷಣ, ಸ್ವಚ್ಛತೆಯ ಕಡೆಗೆ ಹೆಚ್ಚಿನ ಗಮನ ಹರಿಸುವ ಸಲುವಾಗಿ ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಉತ್ತಮ ಮಾಹಿತಿಯನ್ನು ನೀಡಬೇಕು ಎಂದರು.

ಸಭೆಯಲ್ಲಿ ಯೋಜನಾಧಿಕಾರಿ ಎಸ್.ಜಿ. ಮಂಜುನಾಥ, ಮಹಿಳಾ ಜ್ಞಾನವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಮಲ್ಲಿಕಾ ಶೆಟ್ಟಿ ಮತ್ತು 25 ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Edited By : PublicNext Desk
PublicNext

PublicNext

11/06/2026 07:10 pm

Cinque Terre

3.8 K

Cinque Terre

0