ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ವತಿಯಿಂದ ಆಯೋಜಿಸಲಾಗುತ್ತಿರುವ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20-2026 ಟೂರ್ನಿಯ ಲೋಗೋ ಮತ್ತು ಟ್ರೋಫಿಯನ್ನು ಗುರುವಾರ ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹಾಗೂ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಉಪಸ್ಥಿತರಿದ್ದರು.
ಜೂನ್ 20ರಿಂದ ಜುಲೈ 12ರವರೆಗೆ ನಡೆಯಲಿರುವ ಈ ಟೂರ್ನಿಯ ಪಂದ್ಯಗಳು ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ನಗರಗಳಲ್ಲಿ ನಡೆಯಲಿವೆ. ಒಟ್ಟು ಆರು ಫ್ರಾಂಚೈಸಿ ತಂಡಗಳು 34 ಪಂದ್ಯಗಳಲ್ಲಿ ಪ್ರಶಸ್ತಿಗಾಗಿ ಸೆಣಸಲಿವೆ.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ದ್ರಾವಿಡ್, ಮಹಾರಾಜ ಟ್ರೋಫಿ ಯುವ ಕ್ರಿಕೆಟಿಗರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅತ್ಯುತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
ಈ ಟೂರ್ನಿಯನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸ್ಕೌಟ್‌ಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಉತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ವೃತ್ತಿಜೀವನದಲ್ಲಿ ದೊಡ್ಡ ಅವಕಾಶಗಳು ದೊರೆಯುತ್ತವೆ ಎಂದು ಅಭಿಪ್ರಾಯಪಟ್ಟರು.
ಯಶ್ ರಾಜ್ ಪುಂಜಾ ಉದಾಹರಣೆ ನೀಡಿದ ದ್ರಾವಿಡ್, "ಮಹಾರಾಜ ಟ್ರೋಫಿ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ತೋರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಐಪಿಎಲ್ ತಂಡಗಳ ಸ್ಕೌಟ್‌ಗಳು ಈ ಟೂರ್ನಿಯ ಮೇಲೆ ಕಣ್ಣಿಟ್ಟಿರುತ್ತಾರೆ. ಯಶ್ ರಾಜ್ ಪುಂಜಾ ಕರ್ನಾಟಕ ತಂಡವನ್ನು ಪ್ರತಿನಿಧಿಸದಿದ್ದರೂ ಉತ್ತಮ ಪ್ರದರ್ಶನದ ಮೂಲಕ ಐಪಿಎಲ್‌ಗೆ ಆಯ್ಕೆಯಾಗಿದ್ದರು. ಈ ಬಾರಿಯೂ ಇಂತಹ ಪ್ರತಿಭಾವಂತ ಆಟಗಾರರು ಹೊರಹೊಮ್ಮುತ್ತಾರೆ ಎಂಬ ವಿಶ್ವಾಸವಿದೆ" ಎಂದು ಹೇಳಿದರು.
PublicNext
11/06/2026 08:10 pm
LOADING...