ಚಿಕ್ಕಮಗಳೂರು : ಎರಡು ಬೈಕ್‌ಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ನಗರದ ಎಬಿಸಿ ಕಾಫಿ ಕ್ಯೂರಿಂಗ್ ಎದುರಿಗಿರುವ ನಿಖಿಲ್ ಪೆಟ್ರೋಲ್ ಬಂಕ್ ಉದ್ಯೋಗಿಯಾದ ದಿಲೀಪ್ ಗಂಭೀರವಾಗಿ ಗಾಯಗೊಂಡ ದುರ್ದೈವಿ. ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ಹೋಗಿ, ಕರ್ತವ್ಯ ಮುಗಿಸಿ ತಮ್ಮ ಹೀರೋ ಸ್ಪ್ಲೆಂಡರ್ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದರು. ಸಂಜೀವಿನಿ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಹೋಗುತ್ತಿದ್ದಾಗ, ಹಿಂದಿನಿಂದ ಅತಿವೇಗವಾಗಿ ಬಂದ ಮತ್ತೊಂದು ಬೈಕ್ ಸವಾರ ತನ್ನ ವಾಹನವನ್ನು ತೀವ್ರ ನಿರ್ಲಕ್ಷ್ಯ ಹಾಗೂ ದುಡುಕಿನಿಂದ ಚಾಲನೆ ಮಾಡಿಕೊಂಡು ಬಂದು ದಿಲೀಪ್ ಅವರ ಬೈಕಿಗೆ ಜೋರಾಗಿ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ರಭಸಕ್ಕೆ ದಿಲೀಪ್ ರಸ್ತೆಗೆ ಅಪ್ಪಳಿಸಿದ್ದು, ಅವರ ತಲೆಯ ಭಾಗ, ಎಡಗಾಲಿನ ಪಾದ ಹಾಗೂ ಮೈಕೈಗೆ ಗಂಭೀರ ಸ್ವರೂಪದ ಪೆಟ್ಟಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಸ್ಥಳೀಯರಾದ ಭರತ್ ಕುಮಾರ್ ಮತ್ತು ಯೋಗೀಶ್ ಕುಮಾರ್ ತಕ್ಷಣವೇ ಗಾಯಾಳುವಿನ ನೆರವಿಗೆ ಧಾವಿಸಿ, ಆಂಬುಲೆನ್ಸ್ ಮೂಲಕ ಸರ್ಕಾರಿ ಎಂ.ಜಿ. ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರ ತುರ್ತು ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ದಿಲೀಪ್‌ನನ್ನು ಪೋಷಕರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಪಘಾತಕ್ಕೆ ಕಾರಣವಾದ ಬೈಕ್ ಚಾಲಕನ ವಿರುದ್ಧ ಗಾಯಾಳುವಿನ ಚಿಕ್ಕಪ್ಪ ಚಂದ್ರಶೇಖರ್ ನೀಡಿದ ದೂರಿನ ಮೇರೆಗೆ ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
11/06/2026 08:36 pm
LOADING...