ಶಿರಸಿ: ತಾಲೂಕಿನ ಬನವಾಸಿ ಹೋಬಳಿಯಲ್ಲಿ ತಂಬಾಕು ಉತ್ಪನ್ನಗಳನ್ನು ಅಕ್ರಮವಾಗಿ ಮಾರುತ್ತಿದ್ದ ಹಲವು ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ತಪ್ಪಿತಸ್ಥರಿಗೆ ದಂಡ ವಿಧಿಸಿದ್ದಾರೆ.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಪಟ್ಟಣದ ವಿವಿಧ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿ ಪರವಾನಿಗೆ ಪಡೆಯದೇ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಹಾಗೂ ಕಾಯ್ದೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ನೇರ- ಪರೋಕ್ಷವಾಗಿ ತಂಬಾಕು ಪ್ರಚೋದನೆ ಜಾಹೀರಾತು ಪ್ರದರ್ಶಿಸಿದವರಿಗೆ ದಂಡ ವಿಧಿಸಲಾಯಿತು.
ಸಾರ್ವಜನಿಕ ಸ್ಥಳಗಳಲ್ಲಿ, ಕಿರಾಣಿ ಅಂಗಡಿ ಹಾಗೂ ಪಾನ್ ಶಾಪ್ ಗಳ ಮುಂಭಾಗದಲ್ಲಿ ಗುಟ್ಕಾ ತಿಂದು ಉಗುಳುವವರಿಗೆ ನಿರ್ದಾಕ್ಷಿಣ್ಯವಾಗಿ ದಂಡ ಹಾಕಲಾಗುವುದೆಂದು ಅಧಿಕಾರಿಗಳು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಯಶ್ರೀ ಹೆಗಡೆ, ಪಿಎಸ್ಐ ಮಾಂತೇಶ ಕುಂಬಾರ, ಪಿ ಡಿ ಓ ಹನುಮಂತ ಛಲವಾದಿ, ಕಾರ್ಯದರ್ಶಿ ರಾಘವೇಂದ್ರ ಶಿರಹಟ್ಟಿ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಜಿಲ್ಲಾ ಸಂಘಟನಾ ಉಪಾಧ್ಯಕ್ಷ ಸುಧೀರ ನಾಯರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿ.ಸಿ.ಹಿರೇಮಠ ಸೇರಿದಂತೆ ಅನೇಕರು ಇದ್ದರು.
Kshetra Samachara
11/06/2026 09:00 pm
LOADING...