ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಈ ಬಾರಿ ಸಚಿವ ಸ್ಥಾನ ಖಚಿತ; ಶಾಸಕ ಸಿ.ಎಸ್. ನಾಡಗೌಡ ಭವಿಷ್ಯ

ವಿಜಯಪುರ: ಈ ಬಾರಿ ಖಚಿತವಾಗಿ ಸಚಿವ ಸ್ಥಾನ ಕೊಡುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಭವಿಷ್ಯ ನುಡಿದಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಪಬ್ಲಿಕ್ ನೆಕ್ಸ್ಟ್ ನೊಂದಿಗೆ ಮಾತನಾಡಿದ ಅವರು, ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಅತಿ ಹಿರಿಯ ಶಾಸಕ ಯಾರಾದರೂ ಇದ್ದರೆ ಅದು ಎಚ್. ಕೆ.ಪಾಟೀಲ್. ತದನಂತರ ಅಪ್ಪಾಜಿ ನಾಡಗೌಡ, ಇದನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ.

ರಾಜಕೀಯವಾಗಿ ವಿಜಯಪುರ ಜಿಲ್ಲೆಯಲ್ಲಿ ಶಕ್ತಿ ತುಂಬುವುದರೊಂದಿಗೆ ಸಾಕಷ್ಟು ತ್ಯಾಗ ಮಾಡಿದ್ದೇನೆ. ಪಕ್ಷ ನಿಷ್ಠೆಯಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದರು.

Edited By : Shivu K
PublicNext

PublicNext

11/06/2026 10:05 pm

Cinque Terre

11.58 K

Cinque Terre

0

ಸಂಬಂಧಿತ ಸುದ್ದಿ