ಯಾದಗಿರಿ : ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಸವನಗರದಲ್ಲಿರುವ ಕೆಮ್ಮಣ್ಣು ಕ್ವಾರಿ ತಗ್ಗಿನ ನೀರಿನಲ್ಲಿ ಮೂವರು ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿತ್ತು. ಈ ಘಟನೆ ನಡೆದು ಹಲವು ದಿನಗಳು ಕಳೆದಿದ್ದರೂ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಸ್ಥಳೀಯ ಶಾಸಕರು ಯಾರೂ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ.
ಇದರಿಂದ ತೀವ್ರ ಆಕ್ರೋಶಗೊಂಡಿರುವ ಅಹಿಂದ ಸಂಘಟನೆಯ ಹಿರಿಯ ಮುಖಂಡ ಹನುಮೇಗೌಡ ಬೀರನಕಲ್, ಮೃತ ಕುಟುಂಬಗಳಿಗೆ ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮತ್ತು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡುವಂತೆ ಆಗ್ರಹಿಸಿದ್ದಾರೆ.
ಇದೇ ವೇಳೆ, ಯಂಕಪ್ಪ ಎಂಬುವವರು ಮಾತನಾಡಿ, ವಡಗೇರಾ ತಹಸೀಲ್ದಾರ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಡಿಬಿಎಲ್ ಕಂಪನಿ ವಿರುದ್ಧ ದೂರು ದಾಖಲಾಗಿದ್ದರೂ, ಇದುವರೆಗೂ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ ಎಂದು ಕಿಡಿ ಕಾರಿದರು.
ಅಧಿಕಾರಿಗಳ ಈ ನಿರ್ಲಕ್ಷ್ಯ ಧೋರಣೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
PublicNext
11/06/2026 10:21 pm
LOADING...