ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ಕಾಂಕ್ರೀಟ್ ತುಂಬಿದ ಲಾರಿ ಪಲ್ಟಿ

ಚಿಕ್ಕೋಡಿ:ಪ್ರವಾಸಿ ಮಂದಿರದ ಮುಂಭಾಗದಲ್ಲಿ ಚರಂಡಿ ಕಾಮಗಾರಿ ವೇಳೆ ಕಾಂಕ್ರೀಟ್ ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜರುಗಿದೆ.

ಚರಂಡಿಗೆ ಸಿಮೆಂಟ್ ಹಾಕುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾಂಕ್ರೀಟ್ ತುಂಬಿದ್ದ ಭಾರಿ ವಾಹನ ರಸ್ತೆಯಲ್ಲೇ ಉರುಳಿ ಬಿದ್ದಿದ್ದರಿಂದ ಪ್ರವಾಸಿ ಮಂದಿರದ ಮುಂಭಾಗದ ರಸ್ತೆಯಲ್ಲಿ ಕೆಲಕಾಲ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು.

ಮುಖ್ಯ ರಸ್ತೆಯಲ್ಲೇ ಲಾರಿ ಪಲ್ಟಿಯಾಗಿದ್ದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ತೀವ್ರ ಹರಸಾಹಸ ಪಟ್ಟರು. ಸದ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Nagaraj Tulugeri
PublicNext

PublicNext

11/06/2026 10:36 pm

Cinque Terre

13 K

Cinque Terre

0

ಸಂಬಂಧಿತ ಸುದ್ದಿ