ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ​ಸಚಿವ ಸಂಪುಟ ವಿಸ್ತರಣೆ - ಮಂತ್ರಿ ಸ್ಥಾನ ಸಿಗುವ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ - ಶಾಸಕ ಪ್ರಸಾದ್ ಅಬ್ಬಯ್ಯ

​ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಚಟುವಟಿಕೆಗಳು ಗರಿಗೆದರಿರುವ ಬೆನ್ನಲ್ಲೇ, ತಮಗೆ ಮಂತ್ರಿ ಸ್ಥಾನ ಸಿಗುವ ಬಗ್ಗೆ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅತೀವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

​ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೆ ಮಂತ್ರಿ ಸ್ಥಾನ ಸಿಗುವ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ" ಎಂದು ಆಶಾವಾದ ಹೊರಹಾಕಿದರು.

​ಜೂನ್ 20ರ ಬಳಿಕ 2ನೇ ಪಟ್ಟಿ?

ಇದೇ ವೇಳೆ ಸಚಿವ ಸಂಪುಟ ಸೇರಲು ಕಾಯುತ್ತಿರುವ ಆಕಾಂಕ್ಷಿಗಳಿಗೆ ಪ್ರಮುಖ ಸುಳಿವು ನೀಡಿದ ಶಾಸಕರು, ಜೂನ್ 20ರ ನಂತರ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿ ಬಿಡುಗಡೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿಸಿದರು.

Edited By : Nagaraj Tulugeri
PublicNext

PublicNext

11/06/2026 10:56 pm

Cinque Terre

6.29 K

Cinque Terre

0

ಸಂಬಂಧಿತ ಸುದ್ದಿ