ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅರ್ಹ ಫಲಾನುಭವಿಗಳಿಗೆ ಮಾತ್ರ ಮನೆ ಹಂಚಿಕೆಯಾಗಲಿ : ಲಕ್ಷ್ಮಣ್ ಚಿಂಗಳೆ ಆಗ್ರಹ

ಚಿಕ್ಕೋಡಿ: ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಪಟ್ಟಣಕುಡಿ ವ್ಯಾಪ್ತಿಯ ದಾಯಿಂಗಡೆ ಮಳಾದಲ್ಲಿ ನಿರ್ಮಿಸಲಾದ 'ಜಿ ಪ್ಲಸ್-2' ಮನೆಗಳನ್ನು ಯಾವುದೇ ಗೊಂದಲವಿಲ್ಲದೆ, ಕೇವಲ ಅರ್ಹ ಮತ್ತು ಬಡ ಫಲಾನುಭವಿಗಳಿಗೆ ಮಾತ್ರ ವಿತರಿಸಬೇಕು ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಬುಡಾ ಅಧ್ಯಕ್ಷ ಲಕ್ಷ್ಮಣ್ ಚಿಂಗಳೆ ಆಗ್ರಹಿಸಿದ್ದಾರೆ.

ನಿಪ್ಪಾಣಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಮೇ 20 ರಂದು ಜನಪ್ರತಿನಿಧಿಗಳು ಹಳೆಯ ದೋಷಪೂರಿತ ಪಟ್ಟಿಯನ್ನೇ ಇಟ್ಟುಕೊಂಡು ಡ್ರಾ ನಡೆಸಲು ಮುಂದಾಗಿದ್ದರು. ಆದರೆ, ಸಾಮಾನ್ಯ ಜನರ ಹಿತದೃಷ್ಟಿಯಿಂದ ನಾವು ಅದನ್ನು ತಡೆದಿದ್ದೆವು. ಪ್ರಸ್ತುತ ಆಶ್ರಯ ಸಮಿತಿ ಅಸ್ತಿತ್ವದಲ್ಲಿ ಇಲ್ಲದ ಕಾರಣ, ಜಿಲ್ಲಾಧಿಕಾರಿಗಳೇ ಇದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ನಮ್ಮ ಒತ್ತಾಯದ ಮೇರೆಗೆ ಆಡಳಿತ ಮಂಡಳಿಯು 1012 ಫಲಾನುಭವಿಗಳ ಪರಿಷ್ಕೃತ ಪಟ್ಟಿಯನ್ನು ಪ್ರಕಟಿಸಿದೆ. ಸದ್ಯ ಪ್ರತಿ ಫಲಾನುಭವಿಯ ವೈಯಕ್ತಿಕ ಸಮೀಕ್ಷೆ ನಡೆಯುತ್ತಿದ್ದು, ಜೂನ್ 12 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.ಈ ಮನೆ ಹಂಚಿಕೆ ಗೊಂದಲದ ಕುರಿತು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ಗಮನಕ್ಕೆ ತಂದು ನಿರಂತರವಾಗಿ ಬೆನ್ನತ್ತಲಾಗಿತ್ತು. ಇದರ ಫಲವಾಗಿ ಎಸಿ ಸುಭಾಷ್ ಸಂಪಗಾವಿ ಅವರು ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಿ, ಪಾರದರ್ಶಕ ತನಿಖೆಗೆ ಆದೇಶಿಸಿದ್ದಾರೆ ಎಂದರು.

Edited By : PublicNext Desk
Kshetra Samachara

Kshetra Samachara

12/06/2026 11:31 am

Cinque Terre

1.92 K

Cinque Terre

0

ಸಂಬಂಧಿತ ಸುದ್ದಿ