ಮಂಗಳೂರು: ನಟ ಪ್ರಕಾಶ್ ರಾಜ್ ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, "ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಹೆಸರು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮವಾದ ವಿಷಯ ಮತ್ತು ಲಕ್ಷಾಂತರ ಭಕ್ತರ ನಂಬಿಕೆಗೆ ನೋವುಂಟು ಮಾಡಬಹುದಾದ ವಿಚಾರ. ಹಾಗಾಗಿ, ಈ ಕುರಿತ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯ" ಎಂದು ತಿಳಿಸಿದ್ದಾರೆ.
ಸದ್ಯ ತಾನು ದೂರದೂರಿನಲ್ಲಿದ್ದು, ಇನ್ನೆರಡು ದಿನಗಳಲ್ಲಿ ಬೆಂಗಳೂರಿಗೆ ಬಂದು ಮಾಧ್ಯಮ ಮಿತ್ರರ ಮುಖಾಂತರ ಎಲ್ಲ ಪ್ರಶ್ನೆಗಳಿಗೂ ಉತ್ತರಿಸುವುದಾಗಿ ಪ್ರಕಾಶ್ ರಾಜ್ ಭರವಸೆ ನೀಡಿದ್ದಾರೆ. "ಇನ್ನೆರಡು ದಿನಗಳಲ್ಲಿ ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮುಖೇನ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿಮಾತುಗಳನ್ನು ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆ ಪುಕ್ಕಗಳನ್ನು ನಂಬದಿರಿ" ಎಂದು ನಟ ಪ್ರಕಾಶ್ ರಾಜ್ ಜನರಲ್ಲಿ ಮನವಿ ಮಾಡಿದ್ದಾರೆ. ಅಲ್ಲಿಯವರೆಗೂ ಯಾವುದೇ ವದಂತಿಗೆ ಕಿವಿಗೊಡಬೇಡಿ ಎಂದು ಕೇಳಿಕೊಂಡಿದ್ದಾರೆ.
PublicNext
12/06/2026 11:36 am
LOADING...