ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ಮನೇ ಬಿಡಲ್ಲ" - ಸಾವಿನ ವದಂತಿಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ.!

ಬೆಂಗಳೂರು: ಬೆಳ್ಳಂಬೆಳಗ್ಗೆ ಹಿರಿಯ ನಟ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವದಂತಿಯಿಂದ ಆತಂಕಗೊಂಡಿದ್ದ ಅಭಿಮಾನಿಗಳಿಗೆ ಇದೀಗ ಸ್ವತಃ ದೊಡ್ಡಣ್ಣ ಅವರೇ ಸ್ಪಷ್ಟನೆ ನೀಡಿದ್ದಾರೆ. "ನಾನು ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ಮನೇ ಬಿಡಲ್ಲ" ಎಂದು ಖಡಾಖಂಡಿತವಾಗಿ ಪ್ರತಿಕ್ರಿಯಿಸಿದ್ದಾರೆ.

ವಿಡಿಯೋ ಸಂದೇಶದ ಮೂಲಕ ಮಾತನಾಡಿರುವ ದೊಡ್ಡಣ್ಣ, "ನಾನು ಬೆಳಿಗ್ಗೆ ಹಾಸಿಗೆಯಿಂದ ಏಳುವ ಮುನ್ನವೇ ಕೆಲ ಅವಿವೇಕಿಗಳು ನನ್ನ ನಿಧನದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಅದು ಶುದ್ಧ ಸುಳ್ಳು. ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ ಮತ್ತು ನೆಮ್ಮದಿಯಾಗಿದ್ದೇನೆ" ಎಂದು ಸ್ಪಷ್ಟಪಡಿಸಿದ್ದಾರೆ. "ಬೆಳಿಗ್ಗೆಯಿಂದಲೂ ನನ್ನ ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಅನೇಕರು ನಿರಂತರವಾಗಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ಇರುವವರೆಗೂ ನಾನು ನೂರುಕಾಲ ಚೆನ್ನಾಗಿರುತ್ತೇನೆ ಎಂಬ ನಂಬಿಕೆ ನನಗಿದೆ" ಎಂದು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಇದೇ ವೇಳೆ, ಇಂತಹ ದುರುದ್ದೇಶಪೂರಿತ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ದೊಡ್ಡಣ್ಣ, "ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ಮನೇ ಬಿಡಲ್ಲ. ಅವರನ್ನು ಬೆನ್ನತ್ತಿ, ತಕ್ಕ ಶಿಕ್ಷೆ ಕೊಡಿಸುತ್ತೇನೆ" ಎಂದು ಎಚ್ಚರಿಕೆ ನೀಡಿದ್ದಾರೆ.

Edited By :
PublicNext

PublicNext

12/06/2026 12:14 pm

Cinque Terre

21.69 K

Cinque Terre

2

ಸಂಬಂಧಿತ ಸುದ್ದಿ