ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಶಿರಸಿ ತಾಲೂಕಿನ ಹಾಸ್ಟೆಲ್‌ನಲ್ಲಿ ನೆಲೆಸಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದು, ಈ ಘಟನೆ ಎಲ್ಲೆಡೆ ತೀವ್ರ ಅಚ್ಚರಿ ಮೂಡಿಸಿದೆ.

ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸದ್ಯ ನವಜಾತ ಶಿಶುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶಿರಸಿ ತಹಶಿಲ್ದಾರ್ ಹಾಗೂ ಪಿಎಸ್‌ಐ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಸದ್ಯ 9ನೇ ತರಗತಿ ವಿದ್ಯಾರ್ಥಿನಿಯಾಗಿರುವ ಆ ಬಾಲಕಿಗೆ ಸುಮಾರು 14-15 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ತಮ್ಮ ಮಗಳು ಹಾಸ್ಟೆಲ್‌ನಲ್ಲಿ ಸುರಕ್ಷಿತವಾಗಿದ್ದಾಳೆ ಎಂದು ಭಾವಿಸಿದ್ದ ಪೋಷಕರು, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದಾರೆ. ಈ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಾಲಕಿಯ ಈ ಸ್ಥಿತಿಗೆ ಯಾರು ಕಾರಣ? ಆಕೆ ಗರ್ಭಿಣಿಯಾಗಿರುವುದು ಹಾಸ್ಟೆಲ್ ಸಿಬ್ಬಂದಿ ಅಥವಾ ಪೋಷಕರಿಗೆ ಯಾಕೆ ತಿಳಿದಿರಲಿಲ್ಲ? ಎಂಬಂತಹ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ. ಅದರಲ್ಲೂ ಇತ್ತೀಚೆಗಷ್ಟೇ ಶಾಲೆಗಳು ಪ್ರಾರಂಭವಾಗಿದ್ದು, ಕೇವಲ 10 ದಿನಗಳಲ್ಲೇ ಮಗುವಿಗೆ ಜನ್ಮ ನೀಡಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಸದ್ಯ ಪೊಲೀಸರು ಪ್ರಕರಣದ ಕುರಿತು ಕೂಲಂಕಷ ತನಿಖೆ ನಡೆಸುತ್ತಿದ್ದಾರೆ.

Edited By :
PublicNext

PublicNext

12/06/2026 03:56 pm

Cinque Terre

17.86 K

Cinque Terre

0

ಸಂಬಂಧಿತ ಸುದ್ದಿ