ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಳಸಿದ್ದ 4,000 ಇವಿಎಂ ಸುಟ್ಟು ಕರಕಲು : ಅವಘಡದ ಸುತ್ತ ಅನುಮಾನದ ಹುತ್ತ.!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಅಗ್ನಿ ಅವಘಡವೊಂದು ರಾಜಕೀಯ ವಲಯದಲ್ಲಿ ಹೊಸ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೋಲ್ಕತ್ತಾದ ಅಲಿಪೋರ್‌ನಲ್ಲಿರುವ ದಕ್ಷಿಣ 24 ಪರಗಣ ಜಿಲ್ಲಾ ಪರಿಷತ್‌ನ ಆಡಳಿತಾತ್ಮಕ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಸುಮಾರು 4 ಸಾವಿರ ಇವಿಎಂ ಮತಯಂತ್ರಗಳು ಸುಟ್ಟು ಭಸ್ಮವಾಗಿವೆ.

ಜೂನ್ 10ರಂದು ಬೆಳಗ್ಗೆ ಕಾಣಿಸಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಕಟ್ಟಡದ ಮೇಲ್ಮಹಡಿಗಳಿಗೆ ವ್ಯಾಪಿಸಿದ್ದು, 8 ಮತ್ತು 9ನೇ ಮಹಡಿಗಳಲ್ಲಿ ಸಂಗ್ರಹಿಸಿಟ್ಟಿದ್ದ ಇವಿಎಂಗಳು ಸಂಪೂರ್ಣವಾಗಿ ನಾಶವಾಗಿವೆ. ಈ ಮತಯಂತ್ರಗಳನ್ನು ಇತ್ತೀಚೆಗೆ ನಡೆದ ರಾಜ್ಯದ 10 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಬಳಸಲಾಗಿತ್ತು ಎಂದು ತಿಳಿದುಬಂದಿದೆ.

ಇವಿಎಂಗಳ ಜೊತೆಗೆ ಶಾಲಾ ಮಧ್ಯಾಹ್ನದ ಬಿಸಿಊಟ ಯೋಜನೆ ಸೇರಿದಂತೆ ಹಲವು ಪ್ರಮುಖ ಸರ್ಕಾರಿ ದಾಖಲೆಗಳೂ ಬೆಂಕಿಗೆ ಆಹುತಿಯಾಗಿವೆ. ಘಟನೆಯ ನಂತರ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಚಿವ ಕೌಶಿಕ್ ಚೌಧರಿ ಸ್ಥಳಕ್ಕೆ ಭೇಟಿ ನೀಡಿ, ಇದು ಸಾಮಾನ್ಯ ಅಗ್ನಿ ಅವಘಡದಂತೆ ಕಾಣುತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ವಿಧಿವಿಜ್ಞಾನ ತಜ್ಞರ ವರದಿಗಾಗಿ ಕಾಯಲಾಗುತ್ತಿದೆ.

ಇದೀಗ 4 ಸಾವಿರ ಇವಿಎಂಗಳು ಸುಟ್ಟು ಹೋಗಿರುವ ಘಟನೆ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬೆಂಕಿ ಹಿಂದೆ ಯಾವುದೇ ಸಂಚು ಇದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Edited By :
PublicNext

PublicNext

12/06/2026 04:17 pm

Cinque Terre

11.85 K

Cinque Terre

1

ಸಂಬಂಧಿತ ಸುದ್ದಿ