ಚಿಕ್ಕಮಗಳೂರು: ಚರ್ಚ್ ರಸ್ತೆಯಲ್ಲಿರುವ ಸಂತ ಜೋಸೆಫರ ಕಾನ್ವೆಂಟ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್, ಕಾರ್ಮಿಕ ಮತ್ತು ಕಂದಾಯ ಇಲಾಖೆಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಜಂಟಿಯಾಗಿ ಹಮ್ಮಿಕೊಂಡಿದ್ದ 'ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ' ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗಡೆ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಬಾಲಕಾರ್ಮಿಕ ಮುಕ್ತ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ನೈತಿಕ ಹೊಣೆಯಾಗಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಿ ಉತ್ತಮ ನಾಗರಿಕರನ್ನಾಗಿ ರೂಪಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಕಾನೂನು ಕೇವಲ ಕಾಗದದ ಮೇಲೆ ಉಳಿಯದೆ ಪ್ರಾಯೋಗಿಕವಾಗಿ ಜಾರಿಗೆ ಬರಬೇಕು ಮತ್ತು ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವ ಯಾವುದೇ ಪ್ರವೃತ್ತಿ ಅಕ್ಷಮ್ಯ ಅಪರಾಧ ಎಂದು ಅವರು ಎಚ್ಚರಿಸಿದರು. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತ ಯಾರಾದರೂ ಶಾಲೆ ಬಿಟ್ಟು ದುಡಿಯುತ್ತಿರುವುದನ್ನು ಕಂಡರೆ ತಕ್ಷಣ ಶಿಕ್ಷಕರು, ಪೋಷಕರು ಅಥವಾ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿ ಸಮಾಜದ ಕಣ್ಣುಗಳಾಗಬೇಕು ಎಂದು ಕರೆ ನೀಡಿದರು.
Kshetra Samachara
12/06/2026 05:46 pm
LOADING...