ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅಮಾನತುಗೊಂಡಿದ್ದ ಧಾರವಾಡ ಕೇಂದ್ರ ಕಾರಾಗೃಹ ವಾರ್ಡನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಧಾರವಾಡ: ಧಾರವಾಡ ಕೇಂದ್ರ ಕಾರಾಗೃಹ ವಾರ್ಡನ್ ಸಿದ್ದರಾಮಪ್ಪ ವಡ್ಡರ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಧಾರವಾಡ ಕೇಂದ್ರ ಕಾರಾಗೃಹದ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಕಳೆದ ಎರಡು ತಿಂಗಳ ಹಿಂದೆ ಸಿದ್ದರಾಮಪ್ಪ ವಡ್ಡರ ಅಮಾನತು ಮಾಡಲಾಗಿತ್ತು. ನಂತರ ಅವರನ್ನು ಮೈಸೂರು ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಶುಕ್ರವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಧಾರವಾಡ ಉಪ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/06/2026 06:06 pm

Cinque Terre

50.22 K

Cinque Terre

1

ಸಂಬಂಧಿತ ಸುದ್ದಿ