ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಸಾವು

ಚಿಕ್ಕಮಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹನುಮನಹಳ್ಳಿ ನಿವಾಸಿ ಕೆಂಚೇಗೌಡ (48) ಮೃತಪಟ್ಟ ದುರ್ದೈವಿ.

ಅವರು ಎಂದಿನಂತೆ ಜಮೀನು ಹಾಗೂ ಕೂಲಿ ಕೆಲಸ ಮುಗಿಸಿ ಸಂಜೆ ಮನೆಗೆ ಮರಳಿದ್ದರು. ನಂತರ ರಾತ್ರಿ ವೇಳೆ ವಯಕ್ತಿಕ ಕೆಲಸದ ನಿಮಿತ್ತ ಮರ್ಲೆ ಗ್ರಾಮಕ್ಕೆ ತಮ್ಮ ಬಜಾಜ್ ಪ್ಲಾಟೀನಾ ಬೈಕ್‌ನಲ್ಲಿ ತೆರಳಿದ್ದರು. ಈ ವೇಳೆ ಹನುಮನಹಳ್ಳಿ ಕ್ರಾಸ್ ಬಳಿಯ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದರಿಂದ ಅವರ ತಲೆಗೆ ಗಂಭೀರ ಸ್ವರೂಪದ ರಕ್ತಗಾಯವಾಗಿತ್ತು. ತಕ್ಷಣವೇ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆ ಹಾಗೂ ಕೆಆರ್‌ಎಸ್ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ಆದರೆ, ಗಾಯದ ತೀವ್ರತೆ ಹೆಚ್ಚಾಗಿದ್ದರಿಂದ ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರ ಪತ್ನಿ ರಾಜಮ್ಮ ನೀಡಿದ ದೂರಿನನ್ವಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

12/06/2026 06:11 pm

Cinque Terre

800

Cinque Terre

0

ಸಂಬಂಧಿತ ಸುದ್ದಿ