ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜೀನಾಮೆ ಪರ್ವದ ನಡುವೆ ಟಿಎಂಸಿಗೆ ಹೊಸ ಆಘಾತ - ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್‌

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿ ರಾಜೀನಾಮೆ ಪರ್ವ ಮುಂದುವರಿದಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಮತ್ತೊಂದು ರಾಜಕೀಯ ಸಂಕಷ್ಟ ಎದುರಾಗಿದೆ. ಕಳೆದ ಮಾರ್ಚ್‌ನಲ್ಲಿ ನಡೆದ ರಾಜಕೀಯ ಭಾಷಣವೊಂದರಲ್ಲಿ ಕೋಮುದ್ವೇಷ ಹರಡುವ ಹೇಳಿಕೆ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕೋಲ್ಕತ್ತಾ ನಿವಾಸಿಯೊಬ್ಬರು ನೀಡಿದ ದೂರಿನನ್ವಯ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ದೂರಿನಲ್ಲಿ, ಮಮತಾ ಬ್ಯಾನರ್ಜಿ ಅವರ ಭಾಷಣವು ಕೋಮು ಸಾಮರಸ್ಯವನ್ನು ಕದಡುವ ಮತ್ತು ಸಾರ್ವಜನಿಕ ಅಶಾಂತಿಯನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಲಾಗಿದೆ.

ರಾಜಕೀಯ ಭಾಷಣದ ವೇಳೆ ಮಮತಾ, 'ಒಂದು ನಿರ್ದಿಷ್ಟ ಸಮುದಾಯ ಒಟ್ಟಿಗೆ ಬಂದರೆ ಅದು ಇತರರ ಮೇಲೆ ಅಪಾಯಕಾರಿ ಪರಿಣಾಮ ಬೀರಬಹುದು' ಎಂದು ಹೇಳಿದ್ದರು ಎನ್ನಲಾಗಿದೆ. ಈ ಹೇಳಿಕೆಯು ಸಮಾಜದಲ್ಲಿ ಧಾರ್ಮಿಕ ವೈಷಮ್ಯಕ್ಕೆ ಕಾರಣವಾಗಬಹುದು ಎಂದು ದೂರುದಾರರು ದೂರಿದ್ದಾರೆ. ದೂರಿನ ಆಧಾರದ ಮೇಲೆ ಕೋಲ್ಕತ್ತಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Edited By :
PublicNext

PublicNext

12/06/2026 06:40 pm

Cinque Terre

10.08 K

Cinque Terre

0

ಸಂಬಂಧಿತ ಸುದ್ದಿ