ಧಾರವಾಡ: ಶ್ರೀ ರಾಮನ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರೊ.ಭಗವಾನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿವಸೇನೆ ಕಾರ್ಯಕರ್ತರು ಧಾರವಾಡ ಶಹರ ಠಾಣೆಗೆ ದೂರು ನೀಡಿದ್ದಾರೆ.
ಕೋಟಿಗಟ್ಟಲೆ ಹಿಂದೂಗಳ ಶ್ರದ್ಧಾಸ್ಥಾನವಾದ ಶ್ರೀ ರಾಮಚಂದ್ರನ ಬಗ್ಗೆ ಮತ್ತು ಹಿಂದೂ ಧರ್ಮಗ್ರಂಥಗಳ ಕುರಿತು ಅತ್ಯಂತ ಅವಹೇಳನಕಾರಿ, ಪ್ರಚೋದನಕಾರಿ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹೇಳಿಕೆ ನೀಡಿರುವ ಪ್ರೊ.ಕೆ. ಎಸ್.ಭಗವಾನ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಶಿವಸೇನಾ ಕಾರ್ಯಕರ್ತರು ಒತ್ತಾಯಿಸಿದರು.
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಇತ್ತೀಚೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಪ್ರೊ.ಬಿ.ಕೃಷ್ಣಪ್ಪ ಜಯಂತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರೊ.ಕೆ. ಎಸ್.ಭಗವಾನ್ ಅವರು ಸಾರ್ವಜನಿಕ ವೇದಿಕೆಯಲ್ಲಿ ಹಿಂದೂ ಧರ್ಮ, ಪ್ರಭು ಶ್ರೀ ರಾಮಚಂದ್ರ ಮತ್ತು ಹಿಂದೂ ಧರ್ಮಗ್ರಂಥಗಳ ಕುರಿತು ಅತ್ಯಂತ ಅಶ್ಲೀಲವಾಗಿ, ಅವಹೇಳನಕಾರಿ, ಪ್ರಚೋದನಕಾರಿ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ತಮ್ಮ ಭಾಷಣದಲ್ಲಿ "ಪ್ರಭು ಶ್ರೀರಾಮನು ದಶರಥನಾದ ತಂದೆಗೆ ಹುಟ್ಟಿಲ್ಲ, ಪುತ್ರಕಾಮೇಷ್ಠಿ ಯಾಗದಲ್ಲಿ ರಾಣಿಯರು ಪುರೋಹಿತರ ಜೊತೆಗೆ ಮಲಗಬೇಕಿತ್ತು. "ಶ್ರೀರಾಮನು ಪುರೋಹಿತರಿಗೆ ಹುಟ್ಟಿದವನು" ಎಂದು ಅತ್ಯಂತ ಅಶ್ಲೀಲವಾಗಿ ಹೇಳಿಕೆಯನ್ನು ನೀಡಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ. ಹೀಗಾಗಿ ಭಗವಾನ್ ಮೇಲೆ ದೂರು ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಶಿವಸೇನೆ ಮುಖಂಡರು ಒತ್ತಾಯಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/06/2026 07:26 pm
LOADING...