ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ಸುದ್ದಿ ಬಿತ್ತರಿಸುತ್ತಿದ್ದಂತೆ ಫುಟ್‌ಪಾತ್ ತೆರವುಗೊಳಿಸಿದ ಪಾಲಿಕೆ ಅಧಿಕಾರಿಗಳು

ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್....

ಹುಬ್ಬಳ್ಳಿ: ಇದು ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್, ಸುದ್ದಿ ಬಿತ್ತರಿಸಿದ ಕೆಲವೇ ಗಂಟೆಗಳಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು, ಫುಟ್‌ಪಾತ್ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.

ಹೌದು,,, ನಗರದ ಕೊಪ್ಪಿಕರ ರಸ್ತೆಯ ಯೂರೇಕಾ ಸೆಂಟರ್ ಮುಂಭಾಗದಲ್ಲಿ ಬಟ್ಟೆ ವ್ಯಾಪಾರಿಗಳು ಫುಟ್‌ಪಾತ್ ಅನ್ನು ಅತಿಕ್ರಮಿಸಿ ವ್ಯಾಪಾರ ನಡೆಸುತ್ತಿದ್ದರು. ಇದರಿಂದ ಪಾದಚಾರಿಗಳಿಗೆ ಓಡಾಡಲು ತೀವ್ರ ತೊಂದರೆಯಾಗಿತ್ತು. ಈ ಸಮಸ್ಯೆಯ ಕುರಿತು ಪಬ್ಲಿಕ್ ನೆಕ್ಸ್ಟ್ ವರದಿ ಪ್ರಸಾರ ಮಾಡಿದ ತಕ್ಷಣ, ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ಅತಿಕ್ರಮಣ ಅಂಗಡಿಗಳನ್ನು ತೆರವುಗೊಳಿಸಿದರು.

ಪಾದಚಾರಿಗಳಿಗೆ ಮುಕ್ತ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟ ಪಾಲಿಕೆಯ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಪಬ್ಲಿಕ್ ನೆಕ್ಸ್ಟ್ ವರದಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/06/2026 09:33 pm

Cinque Terre

20.22 K

Cinque Terre

12

ಸಂಬಂಧಿತ ಸುದ್ದಿ