ಬಳ್ಳಾರಿ: ರಾಜ್ಯ ಸಚಿವ ಸಂಪುಟ ಪುನರ್‌ರಚನೆಗೆ ಸಂಬಂಧಿಸಿದ ಚಟುವಟಿಕೆಗಳು ಗರಿಗೆದರಿರುವ ಬೆನ್ನಲ್ಲೇ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವಂತೆ ನಗರದ ದಿವಾನೆ ಮಸ್ತಾನ್ ವಲಿ ಬಾಬಾ ದರ್ಗಾದಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಕೌಲ್ ಬಜಾರ್ ಪ್ರದೇಶದ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಜುಮಾ ನಮಾಜ್ ಬಳಿಕ ದರ್ಗಾಕ್ಕೆ ಆಗಮಿಸಿದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಚದ್ದರ್ ಸಮರ್ಪಿಸಿ ವಿಶೇಷ ದುವಾ ಸಲ್ಲಿಸಿದರು. ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ದೊರಕುವ ಮೂಲಕ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿ ಹಾಗೂ ಜಿಲ್ಲೆಯ ಜನರ ಆಶೋತ್ತರಗಳು ಈಡೇರಲಿ ಎಂದು ಪ್ರಾರ್ಥಿಸಿದರು.
ಈ ವೇಳೆ ಮಾತನಾಡಿದ ಮುಖಂಡರು, ಕಾಂಗ್ರೆಸ್ ಹೈಕಮಾಂಡ್ ಹಾಗೂ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಬಳ್ಳಾರಿ ಜಿಲ್ಲೆಯ ರಾಜಕೀಯ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ವರಿಷ್ಠರು ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕು ಅಂತಾ ಒತ್ತಾಯಿಸಿದ್ರು.
Kshetra Samachara
12/06/2026 10:23 pm
LOADING...