ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಸಾವು; ಮಕ್ಕಳ ಆಯೋಗ ಭೇಟಿ

ಬೀದರ್ : ಬೀದರ್‌ನ ಎಲ್‌ಐಸಿ ಕಾಲನಿಯಲ್ಲಿರುವ ಜನಸೇವಾ ಖಾಸಗಿ ಶಾಲೆಯ ಕಟ್ಟಡದಿಂದ ಬಿದ್ದು ಸಮೀರ್ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಾರದಾ ಕಲ್ಮಲ್ಕರ್ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಮಾರು ಎರಡು ಗಂಟೆಗಳ ಕಾಲ ಶಾಲೆಯಲ್ಲೇ ಮೊಕ್ಕಾಂ ಹೂಡಿ ಘಟನೆಯ ಕುರಿತು ಸಮಗ್ರ ಮಾಹಿತಿ ಕಲೆ ಹಾಕಿದರು. ಬಳಿಕ ಘಟನೆಯಿಂದ ಆಘಾತಕ್ಕೊಳಗಾಗಿರುವ ಶಾಲೆಯ ಇತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಆತ್ಮಸ್ಥೈರ್ಯ ತುಂಬಿದರು. ಬಳಿಕ ಮಾತನಾಡಿದ ಮಕ್ಕಳ ರಕ್ಷಣಾಧಿಕಾರಿ ಶಾರದಾ, ಮಕ್ಕಳ ಸುರಕ್ಷತೆ ಅತ್ಯಂತ ಪ್ರಮುಖವಾಗಿದ್ದು, ಘಟನೆಯ ಕುರಿತು ಶಾಲಾಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಿಂದ ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗಿದೆ. ವರದಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸಲ್ಲಿಸಲಾಗುವುದು ಎಂದು ತಿಳಿಸಿದ್ರು.

Edited By :
Kshetra Samachara

Kshetra Samachara

12/06/2026 10:27 pm

Cinque Terre

480

Cinque Terre

0