ಬೀದರ್- ಜಿಲ್ಲೆಯಲ್ಲಿ ಅಕ್ರಮ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟ ಜಾಲದ ವಿರುದ್ಧ ಬೀದರ್ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ 5.88 ಲಕ್ಷ ರೂಪಾಯಿ ಮೌಲ್ಯದ 11 ಕೆ.ಜಿ 775 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ 50 ಸಾವಿರ ರೂಪಾಯಿ ಮೌಲ್ಯದ ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 6.38 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಟಿ.ಮರ್ಜಾಪುರ ಗ್ರಾಮದ ಅರಣ್ಯ ಪ್ರದೇಶದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಎಸ್‌ಪಿ ಪ್ರದೀಪ್ ಗುಂಟಿ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
PublicNext
12/06/2026 10:34 pm
LOADING...