ಬಳ್ಳಾರಿ: ರೈತರಿಗೆ ಯಾವುದೇ ರೀತಿಯ ಷರತ್ತು ವಿಧಿಸದೆ ಮುಕ್ತವಾಗಿ ರಸಗೊಬ್ಬರ ವಿತರಣೆ ಮಾಡಬೇಕು, ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿ ಬೆಲೆ ಏರಿಕೆ ಮಾಡುತ್ತಿರುವ ಕ್ರಮವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಬಳ್ಳಾರಿಯಲ್ಲಿ ಬೈಕ್ ಪ್ರತಿಭಟನೆ ನಡೆಸಿದರು.
ನಗರದ ಬಳ್ಳಾರಿ ಹೆಲ್ತ್ ಸಿಟಿಯಿಂದ ಆರಂಭವಾದ ಪ್ರೊಟೆಸ್ಟ್ ಎಸ್‌ಪಿ ಸರ್ಕಲ್, ದುರ್ಗಮ್ಮ ದೇವಸ್ಥಾನ, ಗಡಿಗಿ ಚೆನ್ನಪ್ಪ ವೃತ್ತ, ಹಳೆ ಬುರ್ಸಪೇಟೆ ಮಾರ್ಗ ಹಾಗೂ ಮೂರ್ತಿ ಸರ್ಕಲ್ ಮೂಲಕ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.
ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಪ್ರತಿಭಟನೆ ನಡೆಸಿದ ರೈತ ಮುಖಂಡರು, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
PublicNext
12/06/2026 10:41 pm
LOADING...