ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಸರ್ಕಾರಿ ಪಿಯು ಕಾಲೇಜಿನಲ್ಲಿ ತರಗತಿ ವೇಳೆ ಛಾವಣಿ ಕುಸಿತ; ಐವರು ವಿದ್ಯಾರ್ಥಿನಿಯರಿಗೆ ಗಾಯ

ಕಲಬುರಗಿ: ಕಲಬುರಗಿಯ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜಿನಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲೇ ಮೇಲ್ಛಾವಣಿಯ ಒಂದು ಭಾಗ ಕುಸಿದು ಬಿದ್ದು, ಐವರು ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ನಡೆದಿದೆ.

​ಉಪನ್ಯಾಸಕರು ಪಾಠ ಮಾಡುತ್ತಿದ್ದ ವೇಳೆಯೇ ಈ ಅವಘಡ ಸಂಭವಿಸಿದೆ. ಛಾವಣಿ ಕುಸಿದ ತಕ್ಷಣವೇ ಗಾಯಗೊಂಡ ವಿದ್ಯಾರ್ಥಿನಿಯರನ್ನು ತಕ್ಷಣವೇ ಸ್ಥಳೀಯ ಜಿಮ್ಸ್ (GIMS) ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಗಾಯಾಳು ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

​​ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಟ್ಟಡದ ದುರಸ್ತಿ ಹಾಗೂ ನಿರ್ವಹಣೆಯ ಲೋಪದ ಕುರಿತು ತನಿಖೆ ಕೈಗೊಂಡಿದ್ದಾರೆ. ಕಾಲೇಜು ಕಟ್ಟಡದ ಸುರಕ್ಷತೆಯ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ.

Edited By : Abhishek Kamoji
PublicNext

PublicNext

12/06/2026 10:42 pm

Cinque Terre

22.64 K

Cinque Terre

1

ಸಂಬಂಧಿತ ಸುದ್ದಿ