ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ಮಕ್ಕಳ ಭವಿಷ್ಯ ದೇಶದ ಆಸ್ತಿ - ಶಿಕ್ಷಣ, ಆರೋಗ್ಯ ಮೂಲಭೂತ ಹಕ್ಕುಗಳು! ನ್ಯಾಯಾಧೀಶ ಬಸವರಾಜ್

ಮಡಿಕೇರಿ : ಮಕ್ಕಳು ಭವಿಷ್ಯದ ಪ್ರಜೆಗಳಾಗಿದ್ದು, ಮಕ್ಕಳಿಗೆ ಶಿಕ್ಷಣ, ಆರೋಗ್ಯ, ಆಟ-ಪಾಠ ಮತ್ತು ಸುರಕ್ಷಿತ ಬಾಲ್ಯ ದೊರೆಯುವುದು ಮೂಲಭೂತ ಹಕ್ಕಾಗಿದೆ. ಆ ನಿಟ್ಟಿನಲ್ಲಿ ಮಕ್ಕಳ ಬೆಳವಣಿಗೆಗೆ ಗಮನಹರಿಸಬೇಕು ಎಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಸಿ.ಕೆ.ಬಸವರಾಜ್ ಕರೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಡತನ, ಅಜ್ಞಾನ, ನಿರುದ್ಯೋಗ ಮತ್ತು ಸಾಮಾಜಿಕ ಸಮಸ್ಯೆಗಳ ಕಾರಣದಿಂದ ಅನೇಕ ಮಕ್ಕಳು ಕಾರ್ಖಾನೆ, ಹೋಟೆಲ್, ಅಂಗಡಿಗಳಲ್ಲಿ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಇದನ್ನು ತಪ್ಪಿಸಿ 14 ವರ್ಷದೊಳಗಿನ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು ಎಂದು ಸಲಹೆ ಮಾಡಿದರು.

ಮಕ್ಕಳು ರಾಷ್ಟ್ರದ ಅಮೂಲ್ಯ ಆಸ್ತಿ ಹಾಗೂ ಭವಿಷ್ಯದ ನಿರ್ಮಾತೃಗಳಾಗಿದ್ದು, ಶಾಲೆಯಲ್ಲಿ ಕಲಿಯಬೇಕಾದ, ಆಟವಾಡಬೇಕಾದ ಮತ್ತು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕಾದ ವಯಸ್ಸಿನಲ್ಲಿ ದುಡಿಮೆಗೆ ತಳ್ಳಲ್ಪಡುವುದು ಅತ್ಯಂತ ವಿಷಾದನೀಯ ಎಂದರು.

Edited By : PublicNext Desk
Kshetra Samachara

Kshetra Samachara

13/06/2026 06:33 am

Cinque Terre

260

Cinque Terre

0

ಸಂಬಂಧಿತ ಸುದ್ದಿ