ತುಮಕೂರು: ಪಾವಗಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ವಿ. ವೆಂಕಟೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಬೋವಿ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡದ ಪ್ರವಾಸಿ ಮಂದಿರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೋವಿ ಸಮಾಜದ ಮುಖಂಡರು, ಸದ್ಯ ಸಮಾಜದಲ್ಲಿ ಮೂವರು ಶಾಸಕರಿದ್ದು, ಶಿವರಾಜ ತಂಗಡಗಿ ಅವರು ಈಗಾಗಲೇ ಮೂರು ಬಾರಿ ಮಂತ್ರಿಯಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ. ಹಾಗಾಗಿ ಈ ಬಾರಿ ಬೋವಿ ಸಮಾಜದ ಕೋಟಾ ಹಾಗೂ ಯುವ ನಾಯಕರ ಕೋಟಾದಡಿಯಲ್ಲಿ ಹೆಚ್.ವಿ. ವೆಂಕಟೇಶ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಇಡೀ ಬೋವಿ ಸಮಾಜವನ್ನು ಒಗ್ಗೂಡಿಸುವ ಮತ್ತು ಪಕ್ಷವನ್ನು ಸಂಘಟಿಸುವ ಅದ್ಭುತ ಶಕ್ತಿ ವೆಂಕಟೇಶ್ ಅವರಿಗೆ ಇದೆ. ಮುಂಬರುವ ದಿನಗಳಲ್ಲಿ ಪಕ್ಷದ ಹಿತದೃಷ್ಟಿಯಿಂದ ಹಾಗೂ ಸಮಾಜದ ಅಭಿವೃದ್ಧಿಗಾಗಿ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳು ಶಾಸಕ ಹೆಚ್.ವಿ. ವೆಂಕಟೇಶ್ ಅವರಿಗೆ ತಕ್ಷಣವೇ ಮಂತ್ರಿ ಸ್ಥಾನ ನೀಡಬೇಕು ಎಂದು ಈ ಸುದ್ದಿಗೋಷ್ಠಿಯ ಮೂಲಕ ಒತ್ತಾಯಿಸಿದ್ದಾರೆ.
PublicNext
13/06/2026 08:10 am
LOADING...