ಉಡುಪಿ : ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹೆರಂಜೆಯಲ್ಲಿ ತೆಂಗಿನ ಕಾಯಿ ಬಿದ್ದು 1.5 ವರ್ಷದ ಮಗು ದಕ್ಷ್ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಮನೆಗೆ ಶಾಸಕ ಯಶ್ ಪಾಲ್ ಸುವರ್ಣ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕರು, ಘಟನೆಯ ಬಗ್ಗೆ ತಕ್ಷಣ ಸರ್ಕಾರಕ್ಕೆ ವರದಿ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ, ಸರ್ಕಾರದ ಮೂಲಕ ಗರಿಷ್ಠ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.
ಘಟನೆ ನಡೆದ ಸ್ಥಳಕ್ಕೆ ಸೂಕ್ತ ರಸ್ತೆ ಸಂಪರ್ಕದ ಬಗ್ಗೆ ಸ್ಥಳೀಯರ ಮನವಿಗೆ ಸ್ಪಂದಿಸಿದ ಶಾಸಕರು ರಸ್ತೆ ಸಂಪರ್ಕ ಜಾಗದ ಮಾಲೀಕರು ರಸ್ತೆಗೆ ಅವಕಾಶ ಕಲ್ಪಿಸಿದಲ್ಲಿ ರಸ್ತೆ ಕಾಮಗಾರಿಗೆ ಆದ್ಯತೆಯ ಮೇರೆಗೆ ಅನುದಾನ ಒದಗಿಸುವ ಭರವಸೆ ನೀಡಿದರು.
ಮೃತ ಮಗುವಿನ ತಂದೆ ಪ್ರಶಾಂತ್ ಪೂಜಾರಿ, ತಾಯಿ ಸುಚಿತ್ರ ಹಾಗೂ ಕುಟುಂಬಸ್ಥರಿಗೆ ಸಂತೈಸಿ, ವೈಯಕ್ತಿಕ ನೆಲೆಯಲ್ಲಿ ಪರಿಹಾರ ಧನ ನೀಡಿದರು.
Kshetra Samachara
13/06/2026 12:22 pm
LOADING...