ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ : ಯುಜಿಡಿ ಸೋರಿಕೆಯಿಂದ 50ಕ್ಕೂ ಹೆಚ್ಚು ಬಾವಿಗಳು ಕಲುಷಿತ - ಸಾಂಕ್ರಾಮಿಕ ರೋಗಗಳ ಭೀತಿ!

ಭಟ್ಕಳ: ಪಟ್ಟಣದ ರಘುನಾಥ್ ರಸ್ತೆ ಸಮೀಪದ ಮಣ್ಕುಳಿ–ಪುಷ್ಪಾಂಜಲಿ ಥಿಯೇಟರ್ ವ್ಯಾಪ್ತಿಯ ವಾರ್ಡ್ 15 ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಯುಜಿಡಿ ಚೇಂಬರ್ ಸೋರಿಕೆಯಿಂದ 50ಕ್ಕೂ ಹೆಚ್ಚು ಬಾವಿಗಳ ನೀರು ಕಲುಷಿತಗೊಂಡಿದ್ದು, ಸಮಸ್ಯೆಯನ್ನು ತಕ್ಷಣವೇ ಬಗೆಹರಿಸುವಂತೆ ಸ್ಥಳೀಯ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಒಳಚರಂಡಿ ನೀರು ರಸ್ತೆಯ ಗಟಾರಿನಲ್ಲಿ ಹರಿಯುತ್ತಿದ್ದು, ದುರ್ವಾಸನೆ ಉಂಟಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.

ಈ ಕುರಿತು ನಗರಸಭೆಗೆ ದೂರು ನೀಡಿದಾಗ, “ಇದು ನಮ್ಮ ವ್ಯಾಪ್ತಿಗೆ ಸಂಬಂಧಿಸಿದ ವಿಷಯವಲ್ಲ, ಐಆರ್‌ಬಿಯನ್ನು ಸಂಪರ್ಕಿಸಿ” ಎಂದು ತಿಳಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮತ್ತೊಂದೆಡೆ, ಐಆರ್‌ಬಿ ಅಧಿಕಾರಿಗಳು “ನಮ್ಮ ಹೊಸ ಲೈನ್‌ಗೆ ಸಂಪರ್ಕ ಕಲ್ಪಿಸುವ ಮೊದಲು ನಗರಸಭೆಯವರು ಹಳೆಯ ಯುಜಿಡಿ ಸಂಪರ್ಕವನ್ನು ಸಂಪೂರ್ಣವಾಗಿ ಬಂದ್ ಮಾಡಿರುವುದರಿಂದ ಸಮಸ್ಯೆ ಉಂಟಾಗಿದೆ” ಎಂದು ಹೇಳುತ್ತಿದ್ದಾರೆ. ಹೀಗಾಗಿ ಉಭಯ ಸಂಸ್ಥೆಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದು, ಸಮಸ್ಯೆ ಮಾತ್ರ ಬಗೆಹರಿಯದೆ ಉಳಿದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಘುನಾಥ್ ರಸ್ತೆಯ ಮಣ್ಕುಳಿ–ಪುಷ್ಪಾಂಜಲಿ ಮಾರ್ಗದಲ್ಲಿ ಮಲಿನ ನೀರು ನಿರಂತರವಾಗಿ ಹರಿಯುತ್ತಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ರೈಲ್ವೆ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಮಳೆಗಾಲದ ಹಿನ್ನೆಲೆಯಲ್ಲಿ ಬಾವಿಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸುವುದು ಕಷ್ಟಕರವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಯುಜಿಡಿ ಚೇಂಬರ್ ಸೋರಿಕೆಯನ್ನು ದುರಸ್ತಿಪಡಿಸಬೇಕು, ಗಟಾರಿನಲ್ಲಿ ಮಲಿನ ನೀರು ಹರಿಯದಂತೆ ಕ್ರಮ ಕೈಗೊಳ್ಳಬೇಕು ಹಾಗೂ ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಮಸ್ಯೆಯನ್ನು ಇನ್ನೆರಡು ದಿನಗಳೊಳಗೆ ಬಗೆಹರಿಸದಿದ್ದಲ್ಲಿ ಜೂನ್ 15ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

Edited By :
PublicNext

PublicNext

13/06/2026 02:00 pm

Cinque Terre

8.6 K

Cinque Terre

0

ಸಂಬಂಧಿತ ಸುದ್ದಿ