ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಸ್ಸಾಂನಲ್ಲಿ ವಾಯುಪಡೆ ವಿಮಾನ ಪತನ : ಐವರು IAF ಸಿಬ್ಬಂದಿ ಹುತಾತ್ಮ

ದಿಸ್ಪುರ: ಅಸ್ಸಾಂನ ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದ ಬಳಿ ಶನಿವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ಎಎನ್-32 ಸಾರಿಗೆ ವಿಮಾನ ಪತನಗೊಂಡಿದ್ದು, ಐವರು ವಾಯುಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ದುರ್ಘಟನೆಯಲ್ಲಿ ಓರ್ವ ಸಹ-ಪೈಲಟ್ ಗಾಯಗೊಂಡಿದ್ದಾರೆ.

ಮೃತಪಟ್ಟವರನ್ನು ಸ್ಕ್ವಾಡ್ರನ್ ಲೀಡರ್ ಪ್ರಶಾಂತ್ ಸಿಂಗ್, ಫ್ಲೈಟ್ ಲೆಫ್ಟಿನೆಂಟ್ ಶುಭಮ್ ಕುಮಾರ್, ಸಾರ್ಜೆಂಟ್ ಜಿತೇಂದ್ರ ಶರ್ಮಾ, ಅಗ್ನಿವೀರ್ ವಾಯು ಖೇಮರಾಮ್ ಕುಮಾವತ್ ಮತ್ತು ಅಗ್ನಿವೀರ್ ವಾಯು ಡ್ಯಾನಿಶ್ ಆಲಂ ಎಂದು ಗುರುತಿಸಲಾಗಿದೆ. ಭಾರತೀಯ ವಾಯುಪಡೆಯು ತನ್ನ ಎಕ್ಸ್ ಖಾತೆಯಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿದೆ.

Edited By :
PublicNext

PublicNext

13/06/2026 02:56 pm

Cinque Terre

11.03 K

Cinque Terre

1