ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಂತೋಷ್ ಲಾಡ್‌ಗೆ ಸಚಿವ ಸ್ಥಾನ ನೀಡಿ - ಅಳ್ನಾವರದಲ್ಲಿ ಅಭಿಮಾನಿಗಳ ಪ್ರತಿಭಟನೆ!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸಚಿವ ಸ್ಥಾನದ ಲಾಬಿ ಜೋರಾಗಿಯೇ ನಡೆದಿದ್ದು,‌ ಸಾಕಷ್ಟು ಜನ ಆಕಾಂಕ್ಷಿಗಳು ಅಖಂಡ ಧಾರವಾಡ ಜಿಲ್ಲೆಯಲ್ಲಿ ಕಸರತ್ತು ನಡೆಸಿದ್ದಾರೆ. ಇದೆಲ್ಲದರ ನಡುವೆ ಶಾಸಕ ಸಂತೋಷ ಲಾಡ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣ ಪಂಚಾಯಿತಿ ಪಕ್ಕದಲ್ಲಿ ಪ್ರತಿಭಟನೆ ಮೂಲಕ ಆಗ್ರಹಿಸಿದ ಕಾರ್ಯಕರ್ತರು, ಸಂತೋಷ ಲಾಡ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಈಗಾಗಲೇ 4 ಬಾರಿ ಶಾಸಕರಾಗಿದ್ದಾರೆ. ಹೀಗಾಗಿ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು. ಸಂತೋಷ ಲಾಡ್ ಅಭಿಮಾನಿಗಳಿಂದ ಸರ್ಕಾರಕ್ಕೆ ಮನವಿ ಮಾಡಲಾಯಿತು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

13/06/2026 03:12 pm

Cinque Terre

16.92 K

Cinque Terre

4

ಸಂಬಂಧಿತ ಸುದ್ದಿ