ಕುಂದಗೋಳ : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಸಂತೋಷ್ ಲಾಡ್ ಹಾಗೂ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅಭಿಮಾನಿಗಳ ಬಳಗದ ವತಿಯಿಂದ ಪ್ರತಿಭಟನೆ ರ್‍ಯಾಲಿ ಕುಂದಗೋಳದಲ್ಲಿ ನಡೆದಿದೆ.
ಹೌದು ! ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಜುಟ್ಟಲ್ ಅವರ ನೇತೃತ್ವದಲ್ಲಿ ಪಟ್ಟಣದ ಗಾಳಿ ಮರೇಮ್ಮದೇವಿ ದೇವಸ್ಥಾನದಿಂದ ಪ್ರತಿಭಟನೆ ರ್‍ಯಾಲಿ ಆರಂಭವಾಗಿ ಅಂಬೇಡ್ಕರ್ ಸರ್ಕಲ್ ತಲುಪಿ ಕೆಪಿಸಿಸಿ ಹಿರಿಯ ಸದಸ್ಯ ಅರವಿಂದಪ್ಪ ಕಟಗಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಂತೋಷ್ ಲಾಡ್ ಮತ್ತು ಸಲೀಂ ಅಹ್ಮದ್ ಅಭಿಮಾನಿಗಳು ಸಚಿವ ಸ್ಥಾನಕ್ಕೆ ಆಗ್ರಹಿಸಿ ನೆಚ್ಚಿನ ನಾಯಕರು ಫೋಟೋ ಹಿಡಿದು ಪ್ರತಿಭಟನೆ ರ್‍ಯಾಲಿ ನಡೆಸಿ, ಸಚಿವ ಸ್ಥಾನ ನೀಡುವಂತೆ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಜಿಲ್ಲಾ, ತಾಲ್ಲೂಕು, ನಗರ ಸೇರಿದಂತೆ ವಿವಿಧ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದು ಪ್ರತಿಭಟನೆಗೆ ಬೆಂಬಲ ತುಂಬಿದರು.
ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್ ಕುಂದಗೋಳ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
13/06/2026 03:25 pm
LOADING...