ತಮಿಳುನಾಡು ಮುಖ್ಯಮಂತ್ರಿಯಾಗಿ ಮೊದಲ ಪ್ರಯತ್ನದಲ್ಲೇ ಅಧಿಕಾರದ ಗದ್ದುಗೆ ಏರುವ ಮೂಲಕ ದಳಪತಿ ವಿಜಯ್ ರಾಜಕೀಯದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆದರೆ, ಈ ರಾಜಕೀಯ ಯಶಸ್ಸಿನ ಬೆನ್ನಲ್ಲೇ ಅವರ ವೈಯಕ್ತಿಕ ಜೀವನದಲ್ಲಿ ದೊಡ್ಡ ಸವಾಲೊಂದು ಎದುರಾಗಿದ್ದು, ಇದೀಗ ಇಡೀ ದೇಶದ ಗಮನ ಅವರತ್ತ ನೆಟ್ಟಿದೆ.
ಮುಖ್ಯಮಂತ್ರಿ ವಿಜಯ್ ಹಾಗೂ ಅವರ ಪತ್ನಿ ಸಂಗೀತ ಅವರ ವಿಚ್ಛೇದನ ಪ್ರಕ್ರಿಯೆಯು ಅಂತಿಮ ಘಟ್ಟಕ್ಕೆ ತಲುಪಿದ್ದು, ಜೂನ್ 15 ರಂದು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ. ಈ ಬೆಳವಣಿಗೆಯಿಂದ ಚಿತ್ರರಂಗ ಹಾಗೂ ರಾಜಕೀಯ ವಲಯಗಳಲ್ಲಿ ಜೂನ್ 15 ರ ವಿಚಾರಣೆಯು ತೀವ್ರ ಕುತೂಹಲ ಕೆರಳಿಸಿದೆ.
ಇದೇ ವೇಳೆ, ವಿಜಯ್ ಮತ್ತು ಸಂಗೀತ ದಂಪತಿ ಮತ್ತೆ ಒಂದಾಗಲಿದ್ದಾರೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಕೌಟುಂಬಿಕ ಕಾರಣಗಳನ್ನು ಮುಂದಿಟ್ಟುಕೊಂಡು, ಇಬ್ಬರೂ ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು, ಮಕ್ಕಳ ಭವಿಷ್ಯ ಹಾಗೂ ಕುಟುಂಬದ ಒಳಿತಿಗಾಗಿ ಮತ್ತೆ ಒಂದಾಗಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ವಿಚ್ಛೇದನ ಅರ್ಜಿ ಸಲ್ಲಿಸಿದಾಗಿನಿಂದಲೂ ಬಿರುಗಾಳಿಗೆ ಸಿಲುಕಿದ್ದ ಈ ಕುಟುಂಬದಲ್ಲಿ ಇದೀಗ ತಂಗಾಳಿ ಬೀಸಲಿದೆಯೇ ಎಂಬ ಪ್ರಶ್ನೆ ಮೂಡಿದೆ.
ಆದರೆ, ವಾಸ್ತವದ ಚಿತ್ರಣವು ಭಿನ್ನವಾಗಿದೆ ಎನ್ನಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ, ಮುಖ್ಯಮಂತ್ರಿ ವಿಜಯ್ ಅವರು ನಟಿ ತ್ರಿಶಾ ಕೃಷ್ಣನ್ ಜೊತೆಗೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದು, ಇದು ಬೇರೆಯದೇ ಸೂಚನೆ ನೀಡುತ್ತಿದೆ. ಆದ್ದರಿಂದ, ಜೂನ್ 15 ರಂದು ನ್ಯಾಯಾಲಯದಲ್ಲಿ ಎರಡೂ ಕಡೆಯ ವಕೀಲರು ಮಂಡಿಸಲಿರುವ ವಾದಗಳು ಹಾಗೂ ನ್ಯಾಯಾಲಯ ತೆಗೆದುಕೊಳ್ಳುವ ನಿರ್ಧಾರಗಳ ಆಧಾರದ ಮೇಲೆ ಮಾತ್ರ ಈ ಪ್ರಕರಣಕ್ಕೆ ಅಧಿಕೃತ ಸ್ಪಷ್ಟತೆ ದೊರೆಯಲಿದೆ.
PublicNext
13/06/2026 03:35 pm