ಕುಂದಗೋಳ : ಕಾಂಗ್ರೆಸ್ ಸರ್ಕಾರದ ಮೊದಲನೇ ಅವಧಿಯಲ್ಲಿ ಕಾರ್ಮಿಕ ಸಚಿವರಾಗಿದ್ದ ಸಂತೋಷ್ ಲಾಡ್ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದಾರೆ ಅಂಥವರಿಗೆ ಎರಡನೇ ಅವಧಿಯಲ್ಲೂ ಸಚಿವ ಸ್ಥಾನ ನೀಡಿ ಎಂದು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಜುಟ್ಟಲ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
ಅವರು ಕುಂದಗೋಳ ಪಟ್ಟಣದಲ್ಲಿ ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ಉದ್ದೇಶಿಸಿ ಮಾತನಾಡಿ "ಸಂತೋಷ್ ಲಾಡ್ ಹಾಗೂ ಸಲೀಂ ಅಹ್ಮದ್ ಇಬ್ಬರಿಗೂ ಸಚಿವ ಸ್ಥಾನ ನೀಡಬೇಕು, ಇದು ಅಭಿಮಾನಿಗಳ ಮನವಿ ಎಂದರು. ಸಂತೋಷ್ ಲಾಡ್ ಮೊದಲ ಅವಧಿಯಲ್ಲೇ ಮಾಡಬೇಕಾದ ಅಭಿವೃದ್ಧಿ ಕಾರ್ಯಗಳು ಬಾಕಿ ಇವೆ ಅವುಗಳಿಗೆ ಇನ್ನು ಅವಕಾಶ ಬೇಕು ಎಂದರು.
ಸಚಿವ ಸ್ಥಾನ ನೀಡಿ ಎಂಬುದು ನಮ್ಮ ಮನವಿ ಹೊರತು, ಆಗ್ರಹ ಅಲ್ಲ ಒಳ್ಳೆಯ ಕೆಲಸ ಮಾಡಿದ ಸಚಿವ ಸಂತೋಷ್ ಲಾಡ್ ತಮ್ಮ ಪೌಂಡೇಶನ್ ಮೂಲಕ ಅನೇಕ ಬಡವರ ಬಾಳಿಗೆ ಬೆಳಕಾಗಿದ್ದಾರೆ ಎಂದರು.
ಸಚಿವ ಸ್ಥಾನ ಸಿಗದೆ ಹೋದರೂ ಕಾಂಗ್ರೆಸ್ ಪಕ್ಷದ ಜೊತೆ ಗೌರವದಿಂದ ಇರುತ್ತೇವೆ, ವರಿಷ್ಠರು ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸ ನಮಗಿದೆ ಎಂದರು.
ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್ ಕುಂದಗೋಳ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
13/06/2026 03:58 pm
LOADING...