ಹಾವೇರಿ: ಹಾವೇರಿ ತಾಲೂಕಿನ ಹಂದಿಗನೂರು ಗ್ರಾಮದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಗ್ರಾಮ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದಾರೂಢ ಬಡಿಗೇರ್ ಹಾಗೂ ಗುತ್ತಲ ಪೊಲೀಸ್ ಠಾಣೆಯ ಪಿಎಸ್‌ಐ ಪರಶುರಾಮ್ ಲಮಾಣಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಗ್ರಾಮ ವಾಸ್ತವ್ಯ ಹೂಡಿದ್ದರು.ಇದರ ಮುಂದುವರಿದ ಭಾಗವಾಗಿ ಬೆಳಗಿನ ಜಾವ ಗ್ರಾಮ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿದ್ದು,ಪೊಲೀಸ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಕೈಜೋಡಿಸಿ ಗ್ರಾಮದ ಪ್ರಮುಖ ರಸ್ತೆ,ಸಾರ್ವಜನಿಕ ಸ್ಥಳಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಿದ್ದಾರೆ. ಪೊಲೀಸ್ ಇಲಾಖೆ ಮತ್ತು ಗ್ರಾಮಸ್ಥರ ಸಹಭಾಗಿತ್ವದಲ್ಲಿ ನಡೆದಿದೆ.
PublicNext
13/06/2026 04:00 pm
LOADING...