ಭಾಗ್ಯನಗರ: ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರು ಆರ್ಥಿಕವಾಗಿ ಅಭಿವೃದ್ದಿ ಹೊಂದುವoತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.
ಪಟ್ಟಣದ ತಾ.ಪಂ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯ 23 ಫಲಾನುಭವಿಗಳಿಗೆ ಪಂಪು ಮೋಟರ್ ವಿತರಿಸಿ ಮಾತನಾಡಿದ ಅವರು ಈಗಾಗಲೇ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ತಾಲೂಕಿನ 23 ರೈತರ ಹೊಲಗಳಲ್ಲಿ ಕೊಳವೆ ಬಾವಿಗಳನ್ನು ಕೊರಸಲಾಗಿದೆ. ಈ ಕೊಳವೆ ಬಾವಿಗಳಿಗೆ ಪುಂಪು ಮೋಟರ್ ಸೇರಿದಂತೆ ಅಗತ್ಯವಿರುವ ಸಲಕರಣೆಗಳನ್ನು ವಿತರಿಸಲಾಗಿದೆ. ಈ ಯೋಜನೆಯಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯಲು ರೈತರು ದಲ್ಲಾಳಿಗಳಿಗೆ ಅವಕಾಶ ನೀಡದಂತೆ ಖುದ್ದಾಗಿ ನಾನೇ ಸ್ಥಳದಲ್ಲಿ ನಿಂತು ಫಲಾನುಭವಿಗಳಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ವಿತರಿಸಿರುವುದಾಗಿ ತಿಳಿಸಿದರಲ್ಲದೇ ಸರ್ಕಾರದಿಂದ ಸಿಗುವ ಯಾವುದೇ ಸೌಲಭ್ಯಗಳನ್ನು ನೇರವಾಗಿ ಅರ್ಹ ಫಲಾನುಭವಿಗಳಿಗೆ ಒದಗಿಸುವುದೇ ನನ್ನ ಮುಖ್ಯ ಉದ್ದೇಶವಾಗಿದೆ ಎಂದ ಅವರು ಸರ್ಕಾರದ ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಫಲಾನುಭವಿಗಳಿಗೆ ತಿಳಿಸಿದರು.
ಸರ್ಕಾರದಿಂದ ಸಿಗಬೇಕಾಗಿರುವ ಸೌಲಭ್ಯಗಳಿಗಾಗಿ ಮಧ್ಯವರ್ತಿಗಳಿಂದ ದೂರವಿರಿ ಅಲ್ಲದೇ ಸರ್ಕಾರದ ಸೌಲಭ್ಯಗಳನ್ನ ಪಡೆಯಲು ಅರ್ಹ ಫಲಾನುಭವಿಗಳಿಂದ ಹಣಕ್ಕಾಗಿ ಕೈಚಾಚಿದರೆ ಅಂತಹವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಬೂರಗಮಡಗು ನರಸಿಂಹಪ್ಪ, ಗೂಳೂರು ಬಾಬು ಸೇರಿದಂತೆ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ದಿ ನಿಗಮದ ಅಧಿಕಾರಿಗಳು, ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಸೇರಿದಂತೆ ಮತ್ತಿತರರು ಇದ್ದರು.
ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ
PublicNext
13/06/2026 04:04 pm
LOADING...