ಬೆಂಗಳೂರು: ಇದೇ 21 ರಂದು ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ-ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತ ಪದಗ್ರಹಣ ಮಾಡಲಿರುವ ಬಿ.ಕೆ.ಹರಿಪ್ರಸಾದ್ ಅವರು, ಅದಕ್ಕೂ ಮುನ್ನವೇ ರಾಜ್ಯಸಭೆಗೆ ಕರ್ನಾಟಕದಿಂದ ಮತ್ತೆ ಆಯ್ಕೆಗೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದರು.
ಇನ್ನು ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಮಲ್ಲಿಕಾರ್ಜುನ ಖರ್ಗೆ ಅವರು ಆತ್ಮೀಯವಾಗಿ ಬರಮಾಡಿಕೊಂಡು ಉಭಯ ಕುಶಲೋಪರಿ ವಿಚಾರಿಸಿಕೊಂಡರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
PublicNext
13/06/2026 07:13 pm
LOADING...