ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ; 10 ಗಂಟೆಯೊಳಗೆ ಕಚೇರಿಗೆ ಹಾಜರಾತಿ ಕಡ್ಡಾಯ

ಬೆಂಗಳೂರು: ಜಿಲ್ಲಾಧಿಕಾರಿಗಳು, ಸಿಇಒಗಳು ಹಾಗೂ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಹೇಳಿರುವುದು ಏನೆಂದರೆ...

ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗಳಿಗೆ ಹಾಜರಾಗಬೇಕು. ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಅಗತ್ಯ ಸೌಲಭ್ಯಗಳನ್ನು ಸಮಯಕ್ಕೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ರೈತರಿಗೆ ಬೀಜ ಬಿತ್ತನೆ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅಗತ್ಯ ಸಹಾಯ ಒದಗಿಸಲಾಗುವುದು ಎಂದು ಹೇಳಿದರು.

ಮಳೆ ಪರಿಸ್ಥಿತಿ ಹಾಗೂ ಕರಾವಳಿ ಪ್ರದೇಶಗಳ ಹವಾಮಾನ ಮಾಹಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ. ಅಗ್ನಿಶಾಮಕ ದಳವು ಇನ್ನಷ್ಟು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಮತದಾರರ ಪಟ್ಟಿಯ ನವೀಕರಣ ಕಾರ್ಯದಲ್ಲಿ ಎಲ್ಲರೂ ಸಹಕರಿಸಬೇಕು. ಬಿಎಲ್ಒಗಳು ನೀಡುವ ಅರ್ಜಿಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು. ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿ, ಯೋಜನೆಗಳ ಸೌಲಭ್ಯಗಳು ಅರ್ಹರಿಗೆ ತಲುಪುತ್ತಿವೆ ಎಂದರು.

ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಸಿಎಸ್‌ಆರ್ ಶಾಲೆಗಳ ಸ್ಥಾಪನೆಗೆ ಒತ್ತು ನೀಡಲಾಗುತ್ತಿದೆ. ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಗಾಂಜಾ, ಡ್ರಗ್ಸ್, ಸೈಬರ್ ಅಪರಾಧ ಹಾಗೂ ಭ್ರಷ್ಟಾಚಾರಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಲಾಗುವುದು. ಎಲ್ಲ ಜಾತಿ, ಧರ್ಮಗಳ ನಡುವೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವುದು ಸರ್ಕಾರದ ಆದ್ಯತೆ ಎಂದು ಸಿಎಂ ತಿಳಿಸಿದರು.

Edited By :
PublicNext

PublicNext

13/06/2026 08:16 pm

Cinque Terre

21.71 K

Cinque Terre

0

ಸಂಬಂಧಿತ ಸುದ್ದಿ