ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆಯಲಿರುವ ಜಿ7 ಶೃಂಗಸಭೆ ಜಾಗತಿಕ ನಾಯಕರ ಮಹತ್ವದ ಮಾತುಕತೆಗಳಿಗೆ ವೇದಿಕೆಯಾಗಲಿದೆ. ಈ ಶೃಂಗಸಭೆಯ ಸಂದರ್ಭದಲ್ಲಿ, ಜೂನ್ 17ರಂದು ಫ್ರಾನ್ಸ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ದ್ವಿಪಕ್ಷೀಯ ಸಭೆ ನಡೆಸಲಿದ್ದು, ಈ ಭೇಟಿಯತ್ತ ಇಡೀ ವಿಶ್ವದ ಗಮನ ನೆಟ್ಟಿದೆ. ಅಮೆರಿಕದ ಅಧಿಕಾರಿಗಳು ಈ ಸಮಾಲೋಚನೆಯನ್ನು ದೃಢಪಡಿಸಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿ, ಹೊರ್ಮುಜ್ ಜಲಸಂಧಿಯ ಸ್ಥಗಿತ ಹಾಗೂ ಇಂಧನ ಕೊರತೆಯಂತಹ ಜಾಗತಿಕ ಸವಾಲುಗಳ ಜೊತೆಗೆ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಮಾತುಕತೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಮೂಲಗಳ ಪ್ರಕಾರ, ಉಭಯ ನಾಯಕರು ವ್ಯಾಪಾರ ಸಂಬಂಧಗಳು, ಇಂಧನ ಸಹಕಾರ, H-1B ವೀಸಾ ನೀತಿ, ಪ್ರಾದೇಶಿಕ ಭದ್ರತೆ ಮತ್ತು ಪಶ್ಚಿಮ ಏಷ್ಯಾದ ಪ್ರಸಕ್ತ ಪರಿಸ್ಥಿತಿ ಕುರಿತು ಚರ್ಚಿಸುವ ನಿರೀಕ್ಷೆಯಿದೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ, ಜೂನ್ 15ರಿಂದ 17ರವರೆಗೆ ಫ್ರಾನ್ಸ್‌ನ ಏವಿಯನ್-ಲೆಸ್-ಬೈನ್ಸ್‌ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಸತತ ಏಳನೇ ಬಾರಿಗೆ ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.
PublicNext
13/06/2026 09:12 pm
LOADING...