ಬೆಂಗಳೂರು: ರಾಜ್ಯದ ಸರ್ವಾಂಗೀಣ ಪ್ರಗತಿ ಹಾಗೂ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದರು.
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (DC), ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (CEO) ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ (SP) ಸುದೀರ್ಘ ಸಮಾಲೋಚನೆ ನಡೆಸಿದ ಸಿಎಂ, ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು.
ಖಡಕ್ ಸೂಚನೆ ನೀಡಿದ ಸಿಎಂ
ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ ಸಿಎಂ, ಜಿಲ್ಲಾ ಮಟ್ಟದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು ಹಾಗೂ ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ತಳಮಟ್ಟದ ಜನರಿಗೆ ತಲುಪಿಸುವಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು ಎಂದು ಅಧಿಕಾರಿಗಳಿಗೆ ಕಟು ಎಚ್ಚರಿಕೆ ನೀಡಿದ್ದಾರೆ.
ಈ ಸಭೆಯಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
PublicNext
13/06/2026 09:54 pm
LOADING...