ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖಾನಾಪುರ ಸಾತನಾಳಿ–ಮಾಚಾಳಿ ಗ್ರಾಮಸ್ಥರ ಸ್ವಯಂಪ್ರೇರಿತ ಕಾರ್ಯ : ಬಸ್ ಸೇವೆಗಾಗಿ ರಸ್ತೆ ದುರಸ್ತಿ

ಖಾನಾಪುರ : ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಸಾತನಾಳಿ ಮತ್ತು ಮಾಚಾಳಿ ಎಂಬ ದುರ್ಗಮ ಗ್ರಾಮಗಳಲ್ಲಿ ಹಲವು ವರ್ಷಗಳಿಂದ ರಸ್ತೆ ಹಾಗೂ ಬಸ್ ಸೌಲಭ್ಯಗಳ ಕೊರತೆಯಿಂದ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು. ವಿಶೇಷವಾಗಿ ಶಾಲೆಗೆ ತೆರಳುವ ವಿದ್ಯಾರ್ಥಿಗಳು, ವೃದ್ಧರು ಹಾಗೂ ದೈನಂದಿನ ಕೆಲಸಗಳಿಗಾಗಿ ಸಂಚರಿಸುವ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು.

ಈ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದರೂ ಪರಿಹಾರ ಕಾಣದ ಹಿನ್ನೆಲೆಯಲ್ಲಿ ಎರಡೂ ಗ್ರಾಮಗಳ ನಾಗರಿಕರು ಸ್ವತಃ ಮುಂದಾಗಿ ರಸ್ತೆ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ ಗ್ರಾಮಸ್ಥರು ಶ್ರಮದಾನದ ಮೂಲಕ ರಸ್ತೆಯನ್ನು ಸುಗಮಗೊಳಿಸುವುದರ ಜೊತೆಗೆ ಬಸ್‌ಗಳ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಹಾಗೂ ತಿರುವು ಪ್ರದೇಶಗಳನ್ನು ಸಮತಟ್ಟುಗೊಳಿಸಿ ವ್ಯವಸ್ಥೆ ಮಾಡಿದ್ದಾರೆ.

ಗ್ರಾಮಸ್ಥರ ಪ್ರಕಾರ, ಇದೀಗ ರಸ್ತೆಯ ಸ್ಥಿತಿ ಹಿಂದಿನದಕ್ಕಿಂತ ಉತ್ತಮಗೊಂಡಿದ್ದು, ಬಸ್ ಸೇವೆ ಆರಂಭಿಸಲು ಅಗತ್ಯ ಮೂಲಸೌಕರ್ಯ ಸಿದ್ಧವಾಗಿದೆ. ಹೀಗಾಗಿ ಸಾತನಾಳಿ ಮತ್ತು ಮಾಚಾಳಿ ಗ್ರಾಮಗಳಿಗೆ ತಕ್ಷಣವೇ ನಿಯಮಿತ ಬಸ್ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂಬಂಧ ಎರಡೂ ಗ್ರಾಮಗಳ ಗ್ರಾಮಸ್ಥರು ಒಗ್ಗೂಡಿ ಸಂಬಂಧಿಸಿದ ಬಸ್ ಡೆಪೋ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಶಿಕ್ಷಣದ ಹಿತದೃಷ್ಟಿಯಿಂದ, ಹಿರಿಯ ನಾಗರಿಕರ ಅನುಕೂಲಕ್ಕಾಗಿ ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಶೀಘ್ರದಲ್ಲೇ ಬಸ್ ಸೇವೆ ಆರಂಭಿಸಬೇಕೆಂದು ಆಗ್ರಹಿಸಿದ್ದಾರೆ.

ನಾಗೇಶ್ ನಾಯ್ಕರ್ ಪಬ್ಲಿಕ್ ನೆಕ್ಸ್ಟ್ ಖಾನಾಪುರ

Edited By : Manjunath H D
PublicNext

PublicNext

13/06/2026 10:51 pm

Cinque Terre

17.21 K

Cinque Terre

0

ಸಂಬಂಧಿತ ಸುದ್ದಿ