ಚಾಮರಾಜನಗರ : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಯೊಬ್ಬ ಸಗಣಿ ಬಳಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮಸಣಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿನ ಬಾಬಾ ಸಾಹೇಬರ ಭಾವಚಿತ್ರಕ್ಕೆ ಅದೇ ಗ್ರಾಮದ ಚಂದ್ರು ಎಂಬಾತ ಈ ಕೃತ್ಯ ಎಸಗಿದ್ದಾನೆ, ಇಂದು ಮುಂಜಾನೆ ಸಗಣಿ ಬಳಿಯುತ್ತಿದ್ದ ವೇಳೆ ಆತನನ್ನ ಹಿಡಿದ ಸಾರ್ವಜನಿಕರು ಅಲ್ಲಿಯೇ ಕಂಬಕ್ಕೆ ಕಟ್ಟಿ ಥಳಿಸಿ ಚಪ್ಪಲಿ ಹಾರಹಾಕಿ ಆಕ್ರೋಶ ಹೊರಹಾಕಿದ್ದಾರೆ.
ಭಾನುವಾರ ಬೆಳಿಗ್ಗೆ 4.30 ರ ವೇಳೆ ಘಟನೆ ನಡೆದಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ, ಇಂತಹ ಹೇಯ ಕೃತ್ಯ ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮಕ್ಕೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ಮಸಣಾಪುರ ಗ್ರಾಮವು ಉದ್ವಿಗ್ನವಾಗಿದ್ದು ಪೊಲೀಸರು ಪರಿಸ್ಥಿತಿಯನ್ನ ತಿಳಿಗೊಳಿಸಲು ಮುಂದಾಗಿದ್ದಾರೆ, ಗ್ರಾಮಕ್ಕೆ ಭೇಟಿ ನೀಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಮಾಹಿತಿ ಕಲೆಹಾಕುತ್ತಿದ್ದು ಕೃತ್ಯವೆಸಗಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
PublicNext
14/06/2026 11:22 am
LOADING...