ಬೆಳ್ತಂಗಡಿ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಔಷಧಿ ಆಸ್ಪತ್ರೆಯ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ಲಾಲು ಗ್ರಾಮದ ಕೆದ್ದು ನಿವಾಸಿ ಚಂದ್ರಶೇಖರ್ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 25 ವರ್ಷಗಳಿಂದ ಕರ್ತವ್ಯದಲ್ಲಿದ್ದಾನೆ. ಈತ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯಾರಲ್ಲಾದರೂ ಹೇಳಿದ್ದಲ್ಲಿ ಕೆಲಸದಿಂದ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಮಹಿಳೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ BNS 75(3), 79, 351(2) ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಚಂದ್ರಶೇಖರ್ ಪರಾರಿ ಆಗಿದ್ದಾನೆ. ಸದ್ಯ ಈತನ ಕಿರುಕುಳಕ್ಕೆ ಬೇಸತ್ತು ಮಹಿಳೆ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
PublicNext
14/06/2026 02:45 pm
LOADING...